ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಪ್ರಣಾಳಿಕೆಯಂತೆ ನುಡಿದಂತೆ ನಡೆಯುತ್ತಿದ್ದಾರೆ. ನಾವು ಸಾಮಾಜಿಕ ನ್ಯಾಯದ ಪರವಾಗಿದ್ದು, ಬಹುದಿನಗಳ ಬೇಡಿಕೆಯಾದ ಅತಿಥಿ ಉಪನ್ಯಾಸಕರ ಸೇವಾ ಭದ್ರತೆಯ ಕುರಿತು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅವರಿಗೆ ಸೂಕ್ತ ನ್ಯಾಯ ಒದಗಿಸುತ್ತೇವೆ ಎಂದು ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಮುಂದೆ ಸತತ 29 ದಿನಗಳಿಂದ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ಸಮಸ್ಯೆಗಳನ್ನು ಆಲಿಸಿ, ಅವರಿಂದ ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಈ ಕುರಿತು ಸಚಿವರ ಗಮನಕ್ಕೆ ತಂದು, ಆದಷ್ಟು ಬೇಗ ನಿಮಗೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ಸದಸ್ಯ ಡಾ. ಚಂದ್ರಶೇಖರ ಕಾಳನ್ನವರ ಮಾತನಾಡಿ, ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 12,000 ಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಯುಜಿಸಿ ಅರ್ಹತೆ ಹೊಂದಿದ್ದಾರೆ. ಆದರೆ, ಹಲವು ವರ್ಷಗಳಿಂದ ಅತ್ಯಂತ ಕಡಿಮೆ ಗೌರವ ಧನ ಪಡೆದು ಸೇವೆ ಸಲ್ಲಿಸುತ್ತಿದ್ದಾರೆ. ಇವರಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ವಯೋವಿತಿ ಮೀರಿದ/ಮೀರುತ್ತಿರುವವರು ಇದ್ದಾರೆ. ಅತಿಥಿ ಉಪನ್ಯಾಸಕರು, ಗ್ರಂಥಪಾಲಕರು ಹಾಗೂ ದೈಹಿಕ ನಿರ್ದೇಶಕರು ಸೇವಾ ಖಾಯಮಾತಿ ಮತ್ತು ಸೇವಾ ಭದ್ರತೆ ಇಲ್ಲದಿರುವುದಿಂದ ಬದುಕು ಅಭದ್ರತೆಯಲ್ಲಿದೆ. ಮನೆ ನಡೆಸುವುದು ಕಷ್ಟವಾಗಿದೆ. ಆದ ಕಾರಣ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರು ಮಾನವೀಯತೆ ಆಧಾರದ ಮೇಲೆ ಎಲ್ಲಾ ಅತಿಥಿ ಉಪನ್ಯಾಸಕರಿಗೆ ಸೇವಾ ಖಾಯಮಾತಿ ನೀಡಬೇಕು ಮನವಿ ಮಾಡಿದರು.ಈ ವೇಳೆ ಪ್ರೊ.ಸಂಗಮೇಶ ಬ್ಯಾಳಿ, ಡಾ.,ಮನೊಹರ ಪೂಜಾರ, ಸುರೇಶ ಮಾಡನಗೇರಿ, ಪ್ರೊ.ಸಂತೋಷ ಕಳ್ಳಿಮನಿ, ಶಶಿಧರ ಪುಜಾರ, ಸುನೀಲ ಮಠಪತಿ, ಕೀರ್ತಿ ಕುಲಕರ್ಣಿ, ಭಾರತಿ ರಾಠೋಡ, ಸಂತೋಷ ತಿಪ್ಪನ್ನವರ, ಕರಿಗೌಡರ, ಮಲ್ಲಿಕಾರ್ಜುನ ಅಂಬಲಿ, ನಾರಾಯಣ ಪತ್ತಾರ, ಎಂ.ರಾಂಪೂರ, ಡಾ.ಸಂತೋಷ.ಕೆ ಮತ್ತು ಬಾಗಲಕೋಟೆಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ಅತಿಥಿ ಉಪನ್ಯಾಸಕರು ಇದ್ದರು.
---ಕೋಟ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಪ್ರಣಾಳಿಕೆಯಂತೆ ನುಡಿದಂತೆ ನಡೆಯುತ್ತಿದ್ದಾರೆ. ನಾವು ಸಾಮಾಜಿಕ ನ್ಯಾಯದ ಪರವಾಗಿದ್ದು, ಬಹುದಿನಗಳ ಬೇಡಿಕೆಯಾದ ಅತಿಥಿ ಉಪನ್ಯಾಸಕರ ಸೇವಾ ಭದ್ರತೆಯ ಕುರಿತು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅವರಿಗೆ ಸೂಕ್ತ ನ್ಯಾಯ ಒದಗಿಸುತ್ತೇವೆ.ವೀಣಾ ಕಾಶಪ್ಪನವರ, ಜಿ.ಪಂ ಮಾಜಿ ಅಧ್ಯಕ್ಷೆ
----ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 12,000 ಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಯುಜಿಸಿ ಅರ್ಹತೆ ಹೊಂದಿದ್ದಾರೆ. ಆದರೆ, ಹಲವು ವರ್ಷಗಳಿಂದ ಅತ್ಯಂತ ಕಡಿಮೆ ಗೌರವ ಧನ ಪಡೆದು ಸೇವೆ ಸಲ್ಲಿಸುತ್ತಿದ್ದಾರೆ. ಇವರಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ವಯೋವಿತಿ ಮೀರಿದ/ಮೀರುತ್ತಿರುವವರು ಇದ್ದಾರೆ. ಅತಿಥಿ ಉಪನ್ಯಾಸಕರು, ಗ್ರಂಥಪಾಲಕರು ಹಾಗೂ ದೈಹಿಕ ನಿರ್ದೇಶಕರು ಸೇವಾ ಖಾಯಮಾತಿ ಮತ್ತು ಸೇವಾ ಭದ್ರತೆ ಇಲ್ಲದಿರುವುದಿಂದ ಬದುಕು ಅಭದ್ರತೆಯಲ್ಲಿದೆ.ಡಾ. ಚಂದ್ರಶೇಖರ ಕಾಳನ್ನವರ, ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ಸದಸ್ಯ
---(ಫೋಟೋ 22ಬಿಕೆಟಿ6,ಜಿ.ಪಂ. ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರಿಗೆ ಅತಿಥಿ ಉಪನ್ಯಾಸಕರಿಂದ ಮನವಿ ಸ್ವೀಕರಿಸಿದರು.)