ಸಾರಾಂಶ
ಸರ್ಕಾರ ಹಾಗೂ ಅಜೀಂ ಪ್ರೇಮ್ ಜೀ ಸಹಯೋಗದಲ್ಲಿ ಮೊಟ್ಟೆ ವಿತರಣೆ
ಕನ್ನಡಪ್ರಭ ವಾರ್ತೆ ರಾಮನಗರವಿದ್ಯಾರ್ಥಿಗಳ ದೈಹಿಕ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಹಾಗೂ ಅಜೀಂ ಪ್ರೇಮ್ ಜೀ ಸಂಸ್ಥೆ ಸಹಯೋಗದಲ್ಲಿ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಬಿಸಿಯೂಟದೊಂದಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದರು.ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ ಈ ಯೋಜನೆ ಜಾರಿಗೆ ತರಲಾಗಿದ್ದು, ಇದರಿಂದ ರಾಜ್ಯದ 55 ಲಕ್ಷ ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ 66 ಸಾವಿರ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಮೊಟ್ಟೆ ನೀಡಲಾಗುತ್ತದೆ ಎಂದರು.
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತ್ರ ಸೇರಿದಂತೆ ಸರ್ವತೋಮುಖ ಬೆಳವಣಿಗೆ ಅಗತ್ಯವಾಗಿರುವ ಎಲ್ಲಾ ಸೌಕರ್ಯ ಒದಗಿಸಲಾಗುತ್ತಿದೆ ಎಂದರು.ನಾನು ರಾಮನಗರ ಜಿಪಂ ಅಧ್ಯಕ್ಷನಾಗಿದ್ದ ವೇಳೆ ಜಿಲ್ಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿಯೇ 2ನೇ ಸ್ಥಾನ ಪಡೆದುಕೊಂಡಿತ್ತು. ಆದರೆ, ಕಳೆದ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯು 26ನೇ ಸ್ಥಾನ ಪಡೆದುಕೊಂಡಿದೆ. ಹಾಗಾಗಿ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಬೇಕು. ಇದು ವೈಯಕ್ತಿಕವಾಗಿ ಹಾಗೂ ರಾಜ್ಯದಲ್ಲಿಯು ಜಿಲ್ಲೆ ಹೆಸರು ಮಾಡಲು ಅನುಕೂಲವಾಗಲಿದೆ ಎಂದು ಹೇಳಿದರು.
ಸಾಂಕೇತಿಕವಾಗಿ ಬಿಸಿಯೂಟದೊಂದಿಗೆ ಚಿಕ್ಕಿ, ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸಿಲಾಯಿತು. ಶಿಕ್ಷಣ ಇಲಾಖೆ ಡಿಡಿಪಿಐ ಬಸವರಾಜೇಗೌಡ, ಬಿಇಒ ಸೋಮಲಿಂಗಯ್ಯ, ಅಧಿಕಾರಿಗಳಾದ ಸೋಮಶೇಖರ್, ಸಿದ್ದರಾಜು ಇದ್ದರು.ಬಿಸಿಯೂಟ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ
ತಾಲೂಕು ವಿದ್ಯಾರ್ಥಿಗಳ ಸಂಖ್ಯೆಚನ್ನಪಟ್ಟಣ 15,4040 ಕನಕಪುರ20,156 ಮಾಗಡಿ13,671 ರಾಮನಗರ16,979 ಒಟ್ಟು 66210