ಈದ್-ಮಿಲಾದ್ ಹಬ್ಬವು ಸಹೋದರತ್ವ, ಸೌಹಾರ್ದತೆ ಹಾಗೂ ಪರಸ್ಪರ ಗೌರವದ ಸಂದೇಶ ಸಾರುವ ಪವಿತ್ರ ಹಬ್ಬವಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು ಎಂದು ಡಿವೈಎಸ್ಪಿ ಚಂದ್ರಶೇಖರ ನಾಯಕ ಹೇಳಿದರು.
ಕನ್ನಡಪ್ರಭ ವಾರ್ತೆ ಸಿರವಾರ
ಈದ್-ಮಿಲಾದ್ ಹಬ್ಬವು ಸಹೋದರತ್ವ, ಸೌಹಾರ್ದತೆ ಹಾಗೂ ಪರಸ್ಪರ ಗೌರವದ ಸಂದೇಶ ಸಾರುವ ಪವಿತ್ರ ಹಬ್ಬವಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು ಎಂದು ಡಿವೈಎಸ್ಪಿ ಚಂದ್ರಶೇಖರ ನಾಯಕ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಈದ್ ಮಿಲಾದ್ ಪೂರ್ವಭಾವಿ ಶಾಂತಿಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಬ್ಬಗಳು ಸಮಾಜದಲ್ಲಿ ಸೌಹಾರ್ದತೆ ಮತ್ತು ಭ್ರಾತೃತ್ವದ ಸಂಕೇತವಾಗಿವೆ. ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಅದೇ ರೀತಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸ್ವಯಂ ಸೇವಕರನ್ನು ನಿಯೋಜಿಸಬೇಕು. ಧ್ವನಿವರ್ಧಕಗಳ ಬಳಕೆಯಲ್ಲಿ ನಿಗದಿತ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಸಮಾಜದ ಹಿರಿಯರು ಯುವಕರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಿಪಿಐ ಶಶಿಕಾಂತ ಎಂ., ಪ್ರೊಬೇಷನರಿ ಪಿಎಸ್ಐ ಹನುಮಂತರಾಯ, ಎಎಸ್ಐ ಬಸನಗೌಡ, ಮುಸ್ಲಿಂ ಸಮಾಜದ ಧರ್ಮಗುರುಗಳು, ಮುಖಂಡರು ಪಾಲ್ಗೊಂಡಿದ್ದರು.---
25ಕೆಪಿಎಸ್‌ಡಬ್ಲ್ಯೂಆರ್ 01: ಡಿವೈಎಸ್ಪಿ ಚಂದ್ರಶೇಖರ ನಾಯಕ