ಇಂದಿನಿಂದ ಎಂಟು ದಿನ ಮದ್ಯವರ್ಜನಾ ಶಿಬಿರ

| Published : Oct 11 2025, 12:02 AM IST

ಸಾರಾಂಶ

ರಾಮನಾಥಪುರದ ಕಾವ್ಯಾಂಜಲಿ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಟ್ರಸ್ಸ್ ವತಿಯಿಂದ ನಡೆಯುವ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಕೆಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿಯವರಿಗೆ ಆಹ್ವಾನ ಪತ್ರಿಕೆ ನೀಡಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಸ್ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಹರಗುರು ಚರಮೂರ್ತಿಗಳು, ಕ್ಷೇತ್ರದ ಜನಪ್ರತಿನಿಧಿಗಳು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮಸ್ಥರು ಭಾಗವಹಿಸುವರು ಎಂದು ಸಮಿತಿಯ ಗೌರವಾಧ್ಯಕ್ಷರಾದ ನರಸಿಂಹಮೂರ್ತಿ ತಿಳಿಸಿದರು.

ರಾಮನಾಥಪುರ: ಇಲ್ಲಿಯ ಕಾವ್ಯಾಂಜಲಿ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಟ್ರಸ್ಸ್ ವತಿಯಿಂದ ನಡೆಯುವ ಮದ್ಯವರ್ಜನ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಕೆಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿಯವರಿಗೆ ಆಹ್ವಾನ ಪತ್ರಿಕೆ ನೀಡಲಾಯಿತು.ರಾಮನಾಥಪುರದಲ್ಲಿ ಅಕ್ಟೋಬರ್ 11ರಿಂದ 18ರವರೆಗೆ 8 ದಿನಗಳ ಕಾಲ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ರಾಮನಾಥಪುರ ಇವರ ಆಶ್ರಯದಲ್ಲಿ ಮದ್ಯವರ್ಜನ ಶಿಬಿರದ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಸ್ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಹರಗುರು ಚರಮೂರ್ತಿಗಳು, ಕ್ಷೇತ್ರದ ಜನಪ್ರತಿನಿಧಿಗಳು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಗ್ರಾಮಸ್ಥರು ಭಾಗವಹಿಸುವರು ಎಂದು ಸಮಿತಿಯ ಗೌರವಾಧ್ಯಕ್ಷರಾದ ನರಸಿಂಹಮೂರ್ತಿ ತಿಳಿಸಿದರು.ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಲೋಕೇಶ್, ಕುಮಾರಸ್ವಾಮಿ, ಉಪಾಧ್ಯಕ್ಷರು ಕಾಳಬೋಯಿ, ಸಿದ್ಧರಾಜು, ಸಮಿತಿಯ ಮೇಲ್ವಿಚಾರಕಿ ಹೇಮಲತಾ ಮುಂತಾದವರು ಇದ್ದರು.