ಸಾರಾಂಶ
ಅರಸೀಕೆರೆ: ಸೆಪ್ಟೆಂಬರ್ 15ರಂದು ಆಚರಿಸಲಾಗುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ, ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು ನಗರದಲ್ಲಿನ ಸೇಂಟ್ ಮೇರೀಸ್ ಶಾಲೆಯಲ್ಲಿ ಗುರುವಾರ ಜರುಗಿದವು. "ನನ್ನ ಮತ, ನನ್ನ ಹಕ್ಕು " ಎಂಬ ಪ್ರಮುಖ ಥೀಮ್‌ನಡಿ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರೌಢಶಾಲಾ ಹಂತದಲ್ಲಿ 146 ಮತ್ತು ಪದವಿ ಪೂರ್ವ ಹಾಗೂ ಪದವಿ ಹಂತದಲ್ಲಿ 45 ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಸ್ಪರ್ಧೆಯ ಫಲಿತಾಂಶದ ಆಧಾರದ ಮೇಲೆ 18 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.ಸ್ಪರ್ಧೆಯಲ್ಲಿ ಆಯ್ಕೆಯಾದ 18 ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆಯನ್ನು ನೀಡು ವ ಮೂಲಕ ಗೌರವಿಸಲಾಯಿತು. ತಹಸೀಲ್ದಾರ್ ಸಂತೋಷ್ ಕುಮಾರ್ ವಿಜೇತರನ್ನು ಅಭಿನಂದಿಸಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪರಶಿವಮೂರ್ತಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಯಶೋಧಮ್ಮ, ಕಾರ್ಮಿಕ ಇಲಾಖೆಯ ಶಶಿಕಲಾ, ಇಸಿಒ ಮಲ್ಲೇಶ್, ಸಮನ್ವಯಾಧಿಕಾರಿ ಶಂಕರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
;Resize=(128,128))
;Resize=(128,128))
;Resize=(128,128))