ಸಾರಾಂಶ
ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ವತಿಯಿಂದ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಅಂತಾರಾಷ್ಟ್ರೀಯ ಸಹಕಾರಿ ವರ್ಷ- ೨೦೨೫’ ವನ್ನು ‘ಏಕ್ ಪೇಡ್ ಮಾ ಕೆ ನಾಮ್’ ಎನ್ನುವ ಪರಿಕಲ್ಪನೆಯಲ್ಲಿ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಕಾಪು
ಇಲ್ಲಿನ ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ವತಿಯಿಂದ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಅಂತಾರಾಷ್ಟ್ರೀಯ ಸಹಕಾರಿ ವರ್ಷ- ೨೦೨೫’ ವನ್ನು ಸಂಘ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ವಿಭಿನ್ನವಾಗಿ ಆಚರಿಸಲಾಯಿತು.ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು ಎನ್ನುವ ವಿಶ್ವಾಸದೊಂದಿಗೆ ‘ಏಕ್ ಪೇಡ್ ಮಾ ಕೆ ನಾಮ್’ ಎನ್ನುವ ಪರಿಕಲ್ಪನೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವನಮಹೋತ್ಸವದ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ವಿವಿಧ ತಳಿಯ ಹಣ್ಣುಗಳ ಸಸಿಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ವೀರೇಂದ್ರ ಪಾಟ್ಕರ್ ಕೋಡುಗುಡ್ಡೆ, ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ, ಶಾಲಾ ಮುಖ್ಯಶಿಕ್ಷಕಿ ಶರ್ಮಿಳಾ, ಎಸ್‌ಸಿಡಿಸಿಸಿ ಬ್ಯಾಂಕ್ ಪ್ರತಿನಿಧಿ ಬಾಲಗೋಪಾಲ ಬಲ್ಲಾಳ್, ಶಿರ್ವ ಶಾಖೆಯ ಸರ್ವ ನಿರ್ದೇಶಕರು, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.