ಸಾರಾಂಶ
ಅರಕಲಗೂಡು ತಾಲೂಕಿನ ಹುಲಿಕಲ್ ಗ್ರಾಮದ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಶುಕ್ರವಾರನಡೆದ ವೈಕುಂಠ ಏಕಾದಶಿ ಪೂಜಾ ಕಾರ್ಯದಲ್ಲಿ ಹಾಸನ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರು ಭಾಗಿಯಾಗಿ ದೇವರ ದರ್ಶನ ಪಡೆದರು. ದೇವರ ದರ್ಶನ ಪಡೆದ ಭಕ್ತರು ವೈಕುಂಠ ದ್ವಾರದ ಪ್ರವೇಶ ಮಾಡಿದರು. ನಂತರ ದೇವಾಲಯದಲ್ಲಿ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಮಾಡಲಾಯಿತು.
ಅರಕಲಗೂಡು: ತಾಲೂಕಿನ ಹುಲಿಕಲ್ ಗ್ರಾಮದ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಶುಕ್ರವಾರನಡೆದ ವೈಕುಂಠ ಏಕಾದಶಿ ಪೂಜಾ ಕಾರ್ಯದಲ್ಲಿ ಹಾಸನ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರು ಭಾಗಿಯಾಗಿ ದೇವರ ದರ್ಶನ ಪಡೆದರು.
ಬೆಳಗ್ಗೆ ದೇವಾಲಯದಲ್ಲಿ ಮೂಲ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಉತ್ಸವ ಮೂರ್ತಿಯನ್ನು ಅಲಂಕರಿಸಿ ಪ್ರಕಾರೋತ್ಸವ ನಡೆಸಿ ವೈಕುಂಠ ದ್ವಾರದಲ್ಲಿ ಕೂರಿಸಲಾಯಿತು. ದೇವರ ದರ್ಶನ ಪಡೆದ ಭಕ್ತರು ವೈಕುಂಠ ದ್ವಾರದ ಪ್ರವೇಶ ಮಾಡಿದರು. ನಂತರ ದೇವಾಲಯದಲ್ಲಿ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಮಾಡಲಾಯಿತು.ಈ ಸಂದರ್ಭದಲ್ಲಿ ಮುಜರಾಯಿ ತಹಸೀಲ್ದಾರ್ ಲತಾ, ತಾಲೂಕು ಕಚೇರಿಯ ಶಿರಸ್ತೇದಾರ್ ಸಿ. ಸ್ವಾಮಿ, ಉಪತಹಸೀಲ್ದಾರ್ ರವಿ, ರಾಜಸ್ವ ನಿರೀಕ್ಷಕ ರಾಘವೇಂದ್ರ, ಗ್ರಾಮ ಆಡಳಿತ ಅಧಿಕಾರಿ ಕಾವ್ಯ, ಪುನೀತ್, ಮೆಹಬೂಬ್, ಪಟೇಲ್, ಸೌಮ್ಯ ಕಂದಾಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು ಹಾಜರಿದ್ದರು.