​ಜಿ.ಎಸ್. ಪಾಟೀಲ್ ಅವರ ಈ ಸಾಧನೆ ರೋಣ ಕ್ಷೇತ್ರಕ್ಕೆ ಸಿಕ್ಕ ದೊಡ್ಡ ಗೌರವ. ಜಿ.ಎಸ್. ಪಾಟೀಲ್ ಅವರು ನಾಲ್ಕೂವರೆ ದಶಕಗಳಿಂದ ಸಾರ್ವಜನಿಕ ಜೀವನದಲ್ಲಿದ್ದು, ಸರಳತೆ ಮತ್ತು ಹಿರಿಯತನಕ್ಕೆ ಹೆಸರುವಾಸಿಯಾದವರು.

ರೋಣ: ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ(ಸ್ಪೀಕರ್) ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರು ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆ ವಿಧಾನಸಭಾ ಕ್ಷೇತ್ರದಲ್ಲಿ ಸಂಭ್ರಮದ ವಾತಾವರಣ ಶುಕ್ರವಾರ ಕಂಡುಬಂತು. ಕ್ಷೇತ್ರಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು, ಜಿ.ಎಸ್. ಪಾಟೀಲರ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ.​ಜಿ.ಎಸ್. ಪಾಟೀಲ್ ಅವರು ವಿಧಾನಸಭೆಯ ಸಭಾಧ್ಯಕ್ಷ ಸ್ಥಾನಕ್ಕೇರುತ್ತಿದ್ದಂತೆ ರೋಣ, ಗಜೇಂದ್ರಗಡ, ನರೇಗಲ್, ಸೂಡಿ, ಇಟಗಿ, ಹಿರೇಹಾಳ, ಕೊತಬಾಳ, ಅರಹುಣಸಿ, ಸವಡಿ, ಅಬ್ಬಿಗೇರಿ, ಚಿಕ್ಕಮಣ್ಣೂರ, ಹೊಸಳ್ಳಿ ಸೇರಿದಂತೆ ಕ್ಷೇತ್ರದ ಪ್ರಮುಖ ಪಟ್ಟಣ ಹಾಗೂ ಗ್ರಾಮಗಳಲ್ಲಿ ಸಂಭ್ರಮ ಮನೆಮಾಡಿತ್ತು.​ಜಿ.ಎಸ್. ಪಾಟೀಲ್ ಅವರ ಈ ಸಾಧನೆ ರೋಣ ಕ್ಷೇತ್ರಕ್ಕೆ ಸಿಕ್ಕ ದೊಡ್ಡ ಗೌರವ. ಜಿ.ಎಸ್. ಪಾಟೀಲ್ ಅವರು ನಾಲ್ಕೂವರೆ ದಶಕಗಳಿಂದ ಸಾರ್ವಜನಿಕ ಜೀವನದಲ್ಲಿದ್ದು, ಸರಳತೆ ಮತ್ತು ಹಿರಿಯತನಕ್ಕೆ ಹೆಸರುವಾಸಿಯಾದವರು. ಅವರು ವಿಧಾನಸಭೆಯ ಅತ್ಯುನ್ನತ ಸಭಾಧ್ಯಕ್ಷ ಪೀಠವನ್ನು ಅಲಂಕರಿಸಿರುವುದು ರೋಣ ಮತಕ್ಷೇತ್ರಕ್ಕೆ ಸಿಕ್ಕ ಐತಿಹಾಸಿಕ ಗೌರವ.

ಅವರ ಅನುಭವ ಶಾಸನಸಭೆಯ ಘನತೆಯನ್ನು ಮತ್ತಷ್ಟು ಹೆಚ್ಚಿಸಲಿದೆ.ಜಿ.ಎಸ್. ಪಾಟೀಲ್ ಅವರು ಜಿಲ್ಲೆಯ ಹಿರಿಯ ಹಾಗೂ ಮುಖಂಡ ರಾಜಕಾರಣಿಗಳಲ್ಲಿ ಒಬ್ಬರು. 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಜತೆಗೆ, ಶಾಸನಸಭೆಯ ನಿಯಮಾವಳಿಗಳು ಹಾಗೂ ಸಂಸದೀಯ ಮೌಲ್ಯಗಳ ಬಗ್ಗೆ ಆಳವಾದ ಜ್ಞಾನ ಹೊಂದಿದ್ದಾರೆ.

ಆಡಳಿತ ಮತ್ತು ವಿರೋಧ ಪಕ್ಷಗಳೆರಡರ ಗೌರವಕ್ಕೆ ಪಾತ್ರರಾಗಿರುವ ಇವರನ್ನು ಸಭಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿರುವುದು ಇವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ರೋಣ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ವೀರಣ್ಣ ಶೆಟ್ಟರ್ ಹರ್ಷ ವ್ಯಕ್ತಪಡಿಸಿದರು.ಇಂದು ಸ್ವಾತಂತ್ರ್ಯೋತ್ಸವ ಆಚರಣೆ

ಗದಗ: ಜಿಲ್ಲಾಡಳಿತದಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಆ. 15ರಂದು ಬೆಳಗ್ಗೆ 9ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.ವಿಧಾನಪರಿಷತ್ ಸಭಾಪತಿ ಸಲೀಂ ಅಹ್ಮದ್ ಹಾಗೂ ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸುವರು. ಶಾಸಕ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಸಂಸದರಾದ ಬಸವರಾಜ ಬೊಮ್ಮಾಯಿ, ಪಿ.ಸಿ.ಗದ್ದಿಗೌಡರ, ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ ಇತರರು ಪಾಲ್ಗೊಳ್ಳುವರು.ಶನಿವಾರ ಬೆಳಗ್ಗೆ 9ಕ್ಕೆ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ನೆರವೇರಿಸುವರು. ಸಾಧಕರಿಗೆ ಸನ್ಮಾನ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.