ನಿಶಾನಿ ಬೆಟ್ಟದಲ್ಲಿ ಆನೆ ದಾಳಿಗೆ ವೃದ್ಧ ಬಲಿ

| Published : Mar 04 2024, 01:19 AM IST

ನಿಶಾನಿ ಬೆಟ್ಟದಲ್ಲಿ ಆನೆ ದಾಳಿಗೆ ವೃದ್ಧ ಬಲಿ
Share this Article
  • FB
  • TW
  • Linkdin
  • Email

ಸಾರಾಂಶ

ಮಡಿಕೇರಿ ಸಮೀಪದ ನಿಶಾನಿ ಬೆಟ್ಟದಲ್ಲಿ ದುರಂತ ನಡೆದಿದೆ. ಗಾಳಿಬೀಡು ಗ್ರಾಮದ ನಿಶಾನಿಬೆಟ್ಟದಲ್ಲಿ ಗಾಳಿಬೀಡು ಗ್ರಾಮದ ವರಡ ನಿವಾಸಿ ಅಪ್ಪಚ್ಚ(60) ಅವರ ಶವ ಪತ್ತೆಯಾಗಿದೆ. ಅವರು ಕಾಡಾನೆ ತುಳಿದು ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗಿನ ನಿಶಾನಿ ಬೆಟ್ಟಕ್ಕೆ ಹೋಗುವ ದಾರಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಇದು ಆನೆ ದಾಳಿಯಿಂದ ನಡೆದ ಸಾವು ಎಂದು ಶಂಕಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಆನೆ ದಾಳಿಗೆ ಬಲಿಯಾಗಿದ್ದಾರೆ. ಕೆಲವು ತಿಂಗಳಿನಿಂದ ಹಲವಾರು ಮಂದಿಯನ್ನು ಆನೆ ದಾಳಿಗೆ ಕಳೆದುಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಇನ್ನೊಂದು ಜೀವ ಬಲಿಯಾಗಿದೆ. ಮಡಿಕೇರಿ ಸಮೀಪದ ನಿಶಾನಿ ಬೆಟ್ಟದಲ್ಲಿ ದುರಂತ ನಡೆದಿದೆ. ಗಾಳಿಬೀಡು ಗ್ರಾಮದ ನಿಶಾನಿಬೆಟ್ಟದಲ್ಲಿ ಗಾಳಿಬೀಡು ಗ್ರಾಮದ ವರಡ ನಿವಾಸಿ ಅಪ್ಪಚ್ಚ(60) ಅವರ ಶವ ಪತ್ತೆಯಾಗಿದೆ. ಅವರು ಕಾಡಾನೆ ತುಳಿದು ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.ಅಪ್ಪಚ್ಚ ಅವರು ಶನಿವಾರ ಕೆಲಸಕ್ಕೆ ಹೋದವರು ಮರಳಿ ಬಂದಿರಲಿಲ್ಲ. ಹೀಗಾಗಿ ರಾತ್ರಿ ಇಡೀ ಮನೆಯವರು ಹುಡುಕಿದ್ದರು. ಆದರೆ ಸಿಕ್ಕಿರಲಿಲ್ಲ. ಮುಂಜಾನೆ ನಿಶಾನಿ ಬೆಟ್ಟಕ್ಕೆ ಪ್ರವಾಸಿಗರು ಚಾರಣಕ್ಕೆ ತೆರಳುವ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ನಿಶಾನೆ ಬೆಟ್ಟದ ದಾರಿಯಲ್ಲಿ ಶವವೊಂದು ಬಿದ್ದಿರುವುದನ್ನು ಚಾರಣಿಗರು ಗಮನಿಸಿ ಸ್ಥಳೀಯರಿಗೆ ಮಾಹಿತಿ ನೀಡಿದರು. ಕೂಡಲೇ ಬಂದು ನೋಡಿದಾಗ ಅದು ಅಪ್ಪಚ್ಚ ಅವರದಾಗಿತ್ತು. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳ ಮತ್ತು ಆಸುಪಾಸಿನಲ್ಲಿ ಆನೆ ನಡೆದಾಡಿದ ಹೆಜ್ಜೆ ಗುರುತುಗಳು ಕಂಡುಬಂದಿದ್ದರಿಂದ ಇದು ಆನೆ ದಾಳಿಯಿಂದ ನಡೆದ ಸಾವು ಎಂದು ಸಂಶಯಿಸಲು ಕಾರಣವಾಗಿದೆ.ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವ ಸಂಘರ್ಷ ನಿರಂತರವಾಗಿ ನಡೆಯುತ್ತಿದೆ. ಆನೆ ದಾಳಿ, ಹುಲಿ ದಾಳಿಯಿಂದಾಗಿ ಮಾನವ ಪ್ರಾಣ ಹಾನಿಯಾಗುತ್ತಿರುವುದು ಮಾತ್ರವಲ್ಲದೆ, ತಾನು ಬೆಳೆದ ಕೃಷಿ ಕೂಡ ವನ್ಯ ಜೀವಿಗಳ ಉಪಟಳದಿಂದ ನಷ್ಟ ಅನುಭವಿಸುವಂತಾಗಿದೆ. ಈ ಬಗ್ಗೆ ಸರ್ಕಾರ ಶಾಶ್ವತ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆ ಇದೆ.