ಬೆಂಗಳೂರಿನಿಂದ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ಕೂಡ್ಲಿಗಿ ಸಮೀಪದ ವಿರುಪಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಆಳವಾದ ಸೇತುವೆ ಗುಂಡಿಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ವೃದ್ಧ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದರೆ, ಈಕೆಯ ಪತಿ ತೀವ್ರಗಾಯಗೊಂಡು ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಈ ಅಪಘಾತದಲ್ಲಿ ಇನ್ನೊಂದು ದಂಪತಿಗೆ ತೀವ್ರ ಗಾಯಗಳಿಗವೆ. | Kannada Prabha
Image Credit: KP
ಅಳಿಯ ರೂಪೇಶ, ಈತನ ಪತ್ನಿ ಕವಿತಾಬಾಯಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಇವರು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೂಡ್ಲಿಗಿ: ಆಳವಾದ ಸೇತುವೆಯ ಗುಂಡಿಗೆ ಕಾರೊಂದು ಮಗುಚಿ ವೃದ್ಧ ದಂಪತಿ ಮೃತಪಟ್ಟ ಘಟನೆ ಕೂಡ್ಲಿಗಿ ಸಮೀಪದ ವಿರುಪಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.ಬೆಂಗಳೂರಿನ ಸುಬ್ಬಣ್ಣಪಾಳ್ಯದ ಶ್ರೀನಿವಾಸ ರಾವ್ (70), ಪತ್ನಿ ರತ್ನಭಾಯಿ (65) ಮೃತರು.
ಇವರ ಅಳಿಯ ರೂಪೇಶ, ಈತನ ಪತ್ನಿ ಕವಿತಾಬಾಯಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಇವರು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಳಿಯನ ಜನ್ಮದಿನದ ಪ್ರಯುಕ್ತ ಹಂಪಿ, ಅಂಜನಾದ್ರಿ ದೇವಸ್ಥಾನದಲ್ಲಿ ಪೂಜೆ ಮಾಡಿಸಲು ಬೆಂಗಳೂರಿನಿಂದ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೂಡ್ಲಿಗಿ ಸೇತುವೆಯ ಗುಂಡಿಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ವೃದ್ಧ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದರೆ, ಈಕೆಯ ಪತಿ ತೀವ್ರ ಗಾಯಗೊಂಡು ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸಿದ ತಕ್ಷಣ ಪಕ್ಕದ ಜಮೀನಿನಲ್ಲಿದ್ದವರು, ಹೈವೇ ಪೆಟ್ರೋಲಿಂಗ್, ಕೂಡ್ಲಿಗಿ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.