ಸಾರಾಂಶ
ಬೆಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ವೃದ್ಧ ಪ್ರಯಾಣಿಕ ಮೃತಪಟ್ಟಿರುವ ಘಟನೆ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಸವೇಶ್ವರನಗರ ನಿವಾಸಿ ಗಂಗಾರೆಡ್ಡಿ(85) ಮೃತ ಪ್ರಯಾಣಿಕ. ಆಂಧ್ರಪ್ರದೇಶದ ಚಿತ್ತೂರು ಮೂಲದ ಗಂಗಾರೆಡ್ಡಿ ಹಲವು ವರ್ಷಗಳಿಂದ ನಗರದ ಬಸವೇಶ್ವರ ನಗರದಲ್ಲಿ ನೆಲೆಸಿದ್ದರು. ಗುರುವಾರ ಮಧ್ಯಾಹ್ನ ಆಂಧ್ರಪ್ರದೇಶಕ್ಕೆ ತೆರಳಲು ಮೆಜೆಸ್ಟಿಕ್‌ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಾಗ ಈ ಅಪಘಾತ ಸಂಭವಿಸಿದೆ.
ಗಂಗಾರೆಡ್ಡಿ ಅವರು ಮೆಜೆಸ್ಟಿಕ್‌ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಆಂಧ್ರ ಟರ್ಮಿನಲ್‌ಗೆ ತೆರಳಲು ಸರ್ವಿಸ್ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ಚಿಕ್ಕಮಗಳೂರಿನ ಮೂಡಿಗೆರೆಯಿಂದ ಬಂದ ಕೆಎಸ್ಆರ್‌ಟಿಸಿ ಬಸ್ ಟರ್ಮಿನಲ್ ಪ್ರವೇಶಿಸಲು ಮುಂದಾದಾಗ ಗಂಗಾರೆಡ್ಡಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಗಂಗಾರೆಡ್ಡಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಚಾಲಕ ರಾಘವೇಂದ್ರನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬನಶಂಕರಿಯಲ್ಲಿರುವ ವಿದ್ಯುತ್ ಚಿತಾಗಾರ ನಾಳೆಯಿಂದ ಸ್ಥಗಿತ
ಬನಶಂಕರಿ ವಿದ್ಯುತ್ ಚಿತಾಗಾರದ ತುರ್ತು ನಿರ್ವಹಣೆ ಕಾಮಗಾರಿ ಪ್ರಯುಕ್ತ 11 ದಿನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.ಚಿತಾಗಾರದ ಎರಡು ಪರ್ನೆಸ್ ಕಾಯಿಲ್‌ಗಳು ಹಾಗೂ ಬ್ರಿಕ್ಸ್‌ಗಳು ಹಾಳಾಗಿರುವುದರಿಂದ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಏ.6 ರಿಂದ 16ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದೆ. ಸಾರ್ವಜನಿಕರು ಸಹಕರಿಸಬೇಕೆಂದು ದಕ್ಷಿಣ ವಲಯದ ಕಾರ್ಯಪಾಲಕ ಎಂಜಿನಿಯರ್ (ವಿದ್ಯುತ್) ಕೋರಿರುತ್ತಾರೆ. ಹೆಚ್ಚಿನ ಮಾಹಿತಿಗೆ 94806 88529 ಸಂಪರ್ಕಿಸಬಹುದು.