ನಾಗಮಂಗಲ: ರಸ್ತೆ ದಾಟುತ್ತಿದ್ದ ವಯೋವೃದ್ಧೆಗೆ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದ ಚಾಮರಾಜನಗರ - ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. ತಾಲೂಕಿನ ಮೂಡಲಕೊಪ್ಪಲು ಗ್ರಾಮದ ಲೇಟ್ ಜವರೇಗೌಡರ ಪತ್ನಿ ಜಯಮ್ಮ(73) ಘಟನೆಯಲ್ಲಿ ಮೃತಪಟ್ಟವರು. ಅನಾರೋಗ್ಯದ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಜಯಮ್ಮ ವೈದ್ಯರು ಬರೆದಿದ್ದ ಮಾತ್ರೆ ಔಷಧಿಗಳನ್ನು ಆಸ್ಪತ್ರೆ ಮುಂಭಾಗದ ಖಾಸಗಿ ಮೆಡಿಕಲ್ ಸ್ಟೋರ್ ನಲ್ಲಿ ಖರೀದಿಸಿ ವೈದ್ಯರಿಗೆ ತೋರಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಜಕ ದಾಟುತ್ತಿದ್ದರು.
ಈ ವೇಳೆ ಮೈಸೂರಿನ ಟೈರ್ ಕಂಪನಿಯೊಂದಕ್ಕೆ ಪೂರೈಸಲು ರಾಸಾಯನಿಕ ಹೊತ್ತು ಸಾಗುತ್ತಿದ್ದ ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಜಯಮ್ಮ ಅವರ ಕೈ ಕಾಲುಗಳು ಮುರಿದು ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿ ಸ್ಥಳದಲ್ಲೇ ಕೊನೆಯುಸಿರೆಳೆದರು. ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಶಿವಕುಮಾರ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಬಳಿಕ ಜಯಮ್ಮ ಅವರ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೊಳಪಡಿಸಿದರು. ಆಸ್ಪತ್ರೆ ಅವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪಟ್ಟಣ ಠಾಣೆಯ ಪೊಲೀಸರು ಮುಂದಿನ ಕಾನೂನು ಕ್ರಮ ವಹಿಸಿದ್ದಾರೆ.ಟ್ಯಾಂಕರ್ ಡಿಕ್ಕಿ ಹೊಡೆದು ವೃದ್ಧೆ ಸ್ಥಳದಲ್ಲೇ ಸಾವು
ಅನಾರೋಗ್ಯದ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಜಯಮ್ಮ ವೈದ್ಯರು ಬರೆದಿದ್ದ ಮಾತ್ರೆ ಔಷಧಿಗಳನ್ನು ಆಸ್ಪತ್ರೆ ಮುಂಭಾಗದ ಖಾಸಗಿ ಮೆಡಿಕಲ್ ಸ್ಟೋರ್ ನಲ್ಲಿ ಖರೀದಿಸಿ ವೈದ್ಯರಿಗೆ ತೋರಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಜಕ ದಾಟುತ್ತಿದ್ದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.