ಆಕೆಯ ಕಣ್ಣಿನ ಗುಡ್ಡೆ ಕಿತ್ತುಬಂದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿ ತನಿಖೆ ತೀವ್ರಗೊಳಿಸಿದ್ದಾರೆ.

ಗುಬ್ಬಿ: ತಾಲೂಕಿನ ನಿಟ್ಟೂರು ಹೋಬಳಿಯ ಕಾರೇಕುರ್ಚಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೃದ್ಧ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಅಂಬಿಕಾ (66) ಮೃತಪಟ್ಟಿರುವ ವೃದ್ಧೆಯಾಗಿದ್ದಾರೆ. ವಾಸದ ಮನೆಯಿಂದ 200 ಮೀಟರ್ ದೂರದ ತೋಟದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿದ್ದ ವೃದ್ಧೆಯ ಶವದಲ್ಲಿ, ಆಕೆಯ ಕಣ್ಣಿನ ಗುಡ್ಡೆ ಕಿತ್ತುಬಂದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿ ತನಿಖೆ ತೀವ್ರಗೊಳಿಸಿದ್ದಾರೆ. ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.