ಕೋಟ ಸಂಸದರಾಗಿ ಆಯ್ಕೆ: ಕಾಪು ಬಿಜೆಪಿ ವತಿಯಿಂದ ಅಭಿನಂದನೆ

| Published : Jun 05 2024, 12:31 AM IST

ಸಾರಾಂಶ

ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕಾಪು ಮಂಡಲ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು. ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ 32 ಸಾವಿರಕ್ಕೂ ಅಧಿಕ ಅಂತರ ದೊರಕಿದೆ.

ಕನ್ನಡಪ್ರಭ ವಾರ್ತೆ ಕಾಪು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ 2.5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕಾಪು ಮಂಡಲ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ 32 ಸಾವಿರಕ್ಕೂ ಅಧಿಕ ಅಂತರ ದೊರಕಿದೆ. ಈ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಶಾಸಕನ ನೆಲೆಯಲ್ಲಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಮಟ್ಟು, ಕಾಪು ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸೋನು ಪಾಂಗಾಳ, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾದ ಕುತ್ಯಾರು ನವೀನ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.