ಚುನಾವಣೆ, ಬಿಜೆಪಿ ಗೆಲುವು ವಿಜಯೋತ್ಸವ

| Published : Dec 04 2023, 01:30 AM IST

ಚುನಾವಣೆ, ಬಿಜೆಪಿ ಗೆಲುವು ವಿಜಯೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿರಹಟ್ಟಿ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.

ಶಿರಹಟ್ಟಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.

ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಫಕ್ಕೀರೇಶ ರಟ್ಟಿಹಳ್ಳಿ, ಪಪಂ ಮಾಜಿ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಪಪಂ ಸದಸ್ಯ ಸಂದೀಪ ಕಪ್ಪತ್ತನವರ ಮಾತನಾಡಿ, ಕಾಂಗ್ರೆಸ್ ಬಿಟ್ಟಿ ಭಾಗ್ಯಗಳನ್ನು ಜನ ನಂಬದೇ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ದೇಶದಲ್ಲಿ ಮೋದಿ ಅವರ ವರ್ಚಸ್ಸು ಕುಂದಿಲ್ಲ. ಯಾರು ಏನೇ ಟೀಕೆ ಮಾಡಿದರು ಜನ ಮಾತ್ರ ಬಿಜೆಪಿಗೆ ಮತ ನೀಡಿ ಮೂರು ರಾಜ್ಯಗಳಲ್ಲಿ ಗೆಲುವು ತಂದುಕೊಟ್ಟಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಎಷ್ಟೇ ಆಮಿಷ ತೋರಿಸಿದರೂ ಈ ಬಾರಿ ಮತದಾರರು ಅವರ ಸುಳ್ಳು ಭರವಸೆಗಳಿಗೆ ಮರುಳಾಗದೇ ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿ ಕೇಂದ್ರದಲ್ಲಿ ಮೋದಿ ಅವರ ಕೈ ಬಲಪಡಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲೂ ದೇಶದಲ್ಲಿ ಮತ್ತೆ ನಿಚ್ಚಳ ಬಹುಮತದಿಂದ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ನರೇದ್ರ ಮೋದಿ ಅವರು ಮೊದಲು ದೇಶ ನಂತರ ಪಕ್ಷ, ವ್ಯಕ್ತಿ ಎಂಬ ತತ್ವವನ್ನು ಅನುಸರಿಸುತ್ತಿದ್ದು, ವಿಶ್ವಮನ್ನಣೆ ಸಂಪಾದಿಸಿ ನಾಯಕರ ಸಾಲಿನಲ್ಲಿ ಒಬ್ಬರಾಗಿದ್ದು, ಈ ಗೌರವವನ್ನು ದೇಶದ ಜನತೆ ಮರೆಯುವುದಿಲ್ಲ. ಕೇಂದ್ರ ಸರ್ಕಾರಗಳ ಜನಪರ, ರೈತರ ಯೋಜನೆಗಳನ್ನು ಜಾರಿ ತಂದು ನುಡಿದಂತೆ ನಡೆದಿದ್ದು, ಕೊಟ್ಟ ಮಾತಿನಂತೆ ನಡೆದ ಪಕ್ಷ ನಮ್ಮದಾಗಿದೆ ಎಂದು ಹೇಳಿದರು.

ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಮತದಾರರು ಕ್ಲೀನ್‌ಸ್ವಿಪ್ ಮಾಡಿದ್ದಾರೆ. ಮೂರು ರಾಜ್ಯಗಳಲ್ಲಿ ಪಕ್ಷ ಜನಭೇರಿ ಬಾರಿಸಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲಿವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲು ರಾಜ್ಯದಲ್ಲಿ ಎಲ್ಲ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ. ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಗುಡಿಸಿ ಹಾಕುವ ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲ. ಅಲ್ಲಿ ವಂಶಾವಳಿ ಆಡಳಿತ ಇದೆ ಹೊರತು ಜನಸಾಮಾನ್ಯರಿಗೆ ಸ್ಥಾನಮಾನಗಳು ಇಲ್ಲ. ಅದೇ ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದಿಂದಲೇ ವಿಶ್ವದಲ್ಲಿ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷವಾಗಿ ಹೊರಹೊಮ್ಮಿದ್ದು, ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ. ಇವರ ಶ್ರಮದಿಂದ ಮೂರು ರಾಜ್ಯಳಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ತಿಳಿಸಿದರು.

ಮುಖಂಡರಾದ ಜಾನು ಲಮಾಣಿ, ಬಿ.ಡಿ. ಪಲ್ಲೇದ, ಎನ್.ಆರ್. ಕುಲಕರ್ಣಿ, ನಾಗರಾಜ ಕುಲಕರ್ಣಿ, ತಿಪ್ಪಣ್ಣ ಕೊಂಚಿಗೇರಿ, ಯಲ್ಲಪ್ಪ ಇಂಗಳಗಿ, ಬಸವರಾಜ ನಾಯಕರ, ಅಕಬರ ಯಾದಗಿರಿ, ಬಸವರಾಜ ಪೂಜಾರ, ಬಸವಣ್ಣೆಪ್ಪ ತುಳಿ, ತಿಪ್ಪಣ್ಣ ಲಮಾಣಿ, ಆಕಾಶ ಭೋರಶೆಟ್ಟರ, ಶ್ರೀನಿವಾಸ ಕಪಟಕರ ಸೇರಿ ಅನೇಕರು ಇದ್ದರು.