ಸಾರಾಂಶ
ಕುಶಾಲನಗರ ಅರಣ್ಯ ತಪಾಸಣಾ ಗೇಟ್ ಬಳಿ ತಾತ್ಕಾಲಿಕ ಶೆಡ್ ನಿರ್ಮಿಸಿ ಅಧಿಕಾರಿಗಳಿಗೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಕಲ್ಪಿಸಿ ಕೊಡುವಲ್ಲಿ ಕುಶಾಲನಗರ ಪುರಸಭೆ ಮತ್ತು ಕಂದಾಯ ಇಲಾಖೆ ಅಧಿಕಾರಿ ಸಿಬ್ಬಂದಿ ಭಾನುವಾರ ಮುಂಜಾನೆಯಿಂದಲೇ ತಮ್ಮನ್ನು ತೊಡಗಿಸಿಕೊಂಡ ದೃಶ್ಯ ಕಂಡು ಬಂತು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಲೋಕಸಭೆ ಚುನಾವಣೆ ಸಂಬಂಧ ಕೊಡಗು, ಮೈಸೂರು ಗಡಿಭಾಗವಾದ ಜಿಲ್ಲೆಯ ಕುಶಾಲನಗರ ಚೆಕ್ ಪೋಸ್ಟ್ ಬಳಿ ವಾಹನಗಳ ತಪಾಸಣಾ ಕೇಂದ್ರ ಆರಂಭಗೊಂಡಿದೆ.ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಗಡಿಯಲ್ಲಿ ವಾಹನಗಳ ತಪಾಸಣಾ ಕೇಂದ್ರದಲ್ಲಿ ಚುನಾವಣಾ ಅಧಿಕಾರಿ, ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ.ಕುಶಾಲನಗರ ತಾಲೂಕು ತಹಸೀಲ್ದಾರ್ ಕಿರಣ್ ಗೌರಯ್ಯ ಮತ್ತು ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕುಶಾಲನಗರ ಅರಣ್ಯ ತಪಾಸಣಾ ಗೇಟ್ ಬಳಿ ತಾತ್ಕಾಲಿಕ ಶೆಡ್ ನಿರ್ಮಿಸಿ ಅಧಿಕಾರಿಗಳಿಗೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಕಲ್ಪಿಸಿ ಕೊಡುವಲ್ಲಿ ಕುಶಾಲನಗರ ಪುರಸಭೆ ಮತ್ತು ಕಂದಾಯ ಇಲಾಖೆ ಅಧಿಕಾರಿ ಸಿಬ್ಬಂದಿ ಭಾನುವಾರ ಮುಂಜಾನೆಯಿಂದಲೇ ತಮ್ಮನ್ನು ತೊಡಗಿಸಿಕೊಂಡ ದೃಶ್ಯ ಕಂಡು ಬಂತು.