ಸಾರಾಂಶ
ಶಾಲಾ ಸಂಸತ್ ಮಕ್ಕಳಿಂದ ಮಕ್ಕಳಿಗಾಗಿ ಮಕ್ಕಳಿಗೋಸ್ಕರ ನಡೆಯುವ ಆಯ್ಕೆ ವಿಧಾನ
ಲಕ್ಷ್ಮೇಶ್ವರ: ಸಮೀಪದ ಆದರಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಆದರಹಳ್ಳಿ ಶಾಲೆಯಲ್ಲಿ ಮಂಗಳವಾರ ಶಾಲಾ ಸಂಸತ್ ಚುನಾವಣೆ ಜರುಗಿತು.
ಪ್ರಜಾಪ್ರಭುತ್ವದ ಮಾದರಿಯಲ್ಲಿ ನಡೆದ ಪ್ರಕ್ರಿಯೆಯು ವಿದ್ಯಾರ್ಥಿಗಳಿಗೆ ಹೊಸ ಅನುಭವ ನೀಡಿತು. ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳು ತಮ್ಮ ಶಾಲಾ ಸಂಸತ್ತಿನ ನಾಯಕರನ್ನು ಇವಿಎಂ ಮಷಿನ್ ನಲ್ಲಿ ಮತ ಚಲಾಯಿಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರು.ಈ ವೇಳೆ ಮುಖ್ಯೋಪಾಧ್ಯಾಯ ಶ್ರೀಕಾಂತ ನಂದೆಣ್ಣವರ ಮಾತನಾಡಿ, ಶಾಲಾ ಸಂಸತ್ ಮಕ್ಕಳಿಂದ ಮಕ್ಕಳಿಗಾಗಿ ಮಕ್ಕಳಿಗೋಸ್ಕರ ನಡೆಯುವ ಆಯ್ಕೆ ವಿಧಾನವಾಗಿದೆ. ಪ್ರಜಾಪ್ರಭುತ್ವ ಹಾಗೂ ಮತದಾನದ ಮಹತ್ವ ಮಕ್ಕಳಿಗೆ ತಿಳಿಸಿಕೊಡುವ ರೀತಿಯಲ್ಲಿ ಚುನಾವಣೆಯ ಕಾರ್ಯ ನಡೆಯಿತು. ಮಕ್ಕಳ ಸಂಸತ್ತಿನಲ್ಲಿ ಮಕ್ಕಳೇ ಸಂಪೂರ್ಣ ಭಾಗಿದಾರರಾಗಿರುತ್ತಾರೆ. ತಮ್ಮ ಹಕ್ಕುಗಳನ್ನು ಪಡೆಯುವ ಮೂಲಕ ಕರ್ತವ್ಯ ನಿರ್ವಹಿಸುವ ಜವಾಬ್ದಾರಿ ಕಲಿಯುವುದಾಗಿದೆ ಎಂದು ಹೇಳಿದರು.
ಎಸ್ ಡಿಎಂಸಿ ಅಧ್ಯಕ್ಷ ಮಹಾಂತಗೌಡ ಪಾಟೀಲ, ಮತದಾನ ನಡೆಯುವಾಗ ಭೇಟಿ ನೀಡಿ ಶಾಲಾ ಸಂಸತ್ತ ಚುನಾವಣೆ ರೀತಿಯಲ್ಲಿ ನೈಜ ಚುನಾವಣಾ ಕಾರ್ಯದಂತೆ ರೂಪಿಸಿದ್ದು, ಇದರಿಂದ ಮಕ್ಕಳಿಗೆ ಪ್ರಜಾಪ್ರಭುತ್ವ ಹಾಗೂ ಚುನಾವಣಾ ಪ್ರಕ್ರಿಯೆಯ ಸಂಪೂರ್ಣ ಪರಿಚಯವಾಗುತ್ತದೆ ಎಂದು ಶಿಕ್ಷಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ಈ ವೇಳೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹಾಜರಿದ್ದು ಚುನಾವಣೆಯ ಪ್ರಕ್ರೀಯೆ ನೋಡಿಕೊಂಡು ಯಶಸ್ವಿಯಾಗುವಂತೆ ಮಾಡಿದರು.