ಚುನಾವಣಾ ವೀಕ್ಷಕರು ಆಯೋಗದ ಕಣ್ಣು, ಕಿವಿಗಳಿದ್ದಂತೆ

| Published : Oct 21 2024, 12:36 AM IST / Updated: Oct 21 2024, 12:37 AM IST

ಚುನಾವಣಾ ವೀಕ್ಷಕರು ಆಯೋಗದ ಕಣ್ಣು, ಕಿವಿಗಳಿದ್ದಂತೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಮನಗರ: ಚುನಾವಣೆಗೆ ನಿಯೋಜಿಸಲಾದ ವೀಕ್ಷಕರು ಕೇಂದ್ರ ಚುನಾವಣಾ ಆಯೋಗದ ಕಣ್ಣು ಹಾಗೂ ಕಿವಿಗಳಂತೆ ಕೆಲಸ ಮಾಡುತ್ತಾರೆ. ಚುನಾವಣಾ ಪ್ರಕ್ರಿಯೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಕಾಲಕಾಲಕ್ಕೆ ಚುನಾವಣಾ ಆಯೋಗ ಹೊರಡಿಸುವ ಮಾರ್ಗಸೂಚಿಗಳಂತೆ ಕರ್ತವ್ಯ ನಿರ್ವಹಿಸಿ ವರದಿ ಮಾಡುವ ಕೆಲಸ ಮಾಡುತ್ತಾರೆ ಎಂದು ಚನ್ನಪಟ್ಟಣ ಉಪ ಚುನಾವಣೆಗೆ ಖರ್ಚು ವೆಚ್ಚಗಳ ವೀಕ್ಷಕರಾಗಿ ನಿಯೋಜಿಸಲಾಗಿರುವ ಐಆರ್‌ಎಸ್ ಅಧಿಕಾರಿ ಪ್ರಶಾಂತ್ ಗಡೇಕರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಚುನಾವಣೆಗಾಗಿ ಮಾಡುವ ಖರ್ಚುವೆಚ್ಚಗಳಿಗೆ ಸಂಬಂಧಿಸಿದಂತೆ ಪ್ರತಿದಿನ ನಿಗದಿತ ನಮೂನೆಯಲ್ಲಿ ವರದಿ ಸಲ್ಲಿಸುವಂತೆ ಸಹಾಯಕ ವೆಚ್ಚ ವೀಕ್ಷಕರು ಹಾಗೂ ಅವರ ತಂಡಕ್ಕೆ ಸೂಚಿಸಿದರು.

ಈ ಉಪ ಚುನಾವಣೆಗೆ ನಿಯೋಜಿಸಲಾದ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಮುಕ್ತ ಹಾಗೂ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರು ಚನ್ನಪಟ್ಟಣ ಉಪ ಚುನಾವಣೆಗೆ ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿರುವ ಸಿದ್ದತೆಗಳ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಟಿ.ವಿ. ಸುರೇಶ್ ಅವರು ಪೊಲೀಸ್ ಇಲಾಖೆಯಿಂದ 276 ಮತಗಟ್ಟೆಯಲ್ಲಿ ಕೈಗೊಂಡಿರುವ ಭದ್ರತೆ, ಮತ ಎಣಿಕೆ ಕೊಠಡಿ ಹಾಗೂ ಚೆಕ್‌ಪೋಸ್ಟ್ ಗಳ ಬಳಿ ಕೈಗೊಂಡಿರುವ ಬಂದೋಬಸ್ತ್ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಬಿನೋಯ್ ಅವರು ಇದೂವರೆಗೂ ನಡೆದಿರುವ ಚುನಾವಣಾ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ವಿವಿಧ ತಂಡಗಳ ನೋಡಲ್ ಅಧಿಕಾರಿಗಳು, ಚನ್ನಪಟ್ಟಣದ ಡಿವೈಎಸ್‌ಪಿ ಗಿರಿ ಹಾಗೂ ಇತರೆ ಅಧಿಕಾರಿಗಳಿದ್ದರು.

20ಕೆಆರ್ ಎಂಎನ್ 16.ಜೆಪಿಜಿ

ಚನ್ನಪಟ್ಟಣ ಉಪ ಚುನಾವಣೆಗೆ ಖರ್ಚುವೆಚ್ಚಗಳ ವೀಕ್ಷಕರಾಗಿ ನಿಯೋಜಿಸಲಾಗಿರುವ ಐಆರ್‌ಎಸ್ ಅಧಿಕಾರಿ ಪ್ರಶಾಂತ್ ಗಡೇಕರ್ ಅಧಿಕಾರಿಗಳ ಸಭೆ ನಡೆಸಿದರು.