ಸಾರಾಂಶ
ತಾಲೂಕಿನ ಅರೇಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಹುಲಿಕಲ್ ಕ್ಷೇತ್ರದ ಸದಸ್ಯೆ ಭಾರತಿ ತಿಮ್ಮೇಗೌಡ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಿಸಿದರು.
ಕನ್ನಡಪ್ರಭ ವಾರ್ತೆ ತುರುವೇಕೆರೆ
ತಾಲೂಕಿನ ಅರೇಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಹುಲಿಕಲ್ ಕ್ಷೇತ್ರದ ಸದಸ್ಯೆ ಭಾರತಿ ತಿಮ್ಮೇಗೌಡ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಿಸಿದರು.ಅಧ್ಯಕ್ಷೆ ಭಾರತಿ ತಿಮ್ಮೆಗೌಡ ಮಾತನಾಡಿ ತಮ್ಮ ಆಯ್ಕೆಗೆ ಸಹಕರಿಸಿದ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರಿಗೆ ಮತ್ತು ಹುಲಿಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನತೆಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಅಲ್ಲದೇ ಎಲ್ಲಾ ಸದಸ್ಯರ ಸಹಕಾರ ಪಡೆದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಅಗತ್ಯಗಳನ್ನು ಪೂರೈಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಹೇಳಿದರು. ನೂತನ ಅಧ್ಯಕ್ಷೆ ಭಾರತಿ ತಿಮ್ಮೇಗೌಡರನ್ನು ಉಪಾಧ್ಯಕ್ಷೆ ಲಕ್ಷ್ಮಮ್ಮ, ಸದಸ್ಯರಾದ ಆರ್.ಹೇಮಚಂದ್ರು, ಆರ್.ಶಿವಣ್ಣ, ತೇಜಾವತಿ, ಕೆ.ಎಲ್.ರಾಜಶೇಖರ್, ಕುಮಾರ್, ಸುಜಾತ, ಸುಮಿತ್ರಮ್ಮ, ಪಿಡಿಓ ಉಮೇಶ್, ಕಾರ್ಯದರ್ಶಿ ಜಯ್ಯಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಬಿ.ಜಗದೀಶ್ಮುಖಂಡರಾದ ಶಂಕರಪ್ಪ, ಪ್ರಸನ್ನಕುಮಾರ್, ರಂಗಸ್ವಾಮಿ, ಪುಟ್ಟರಾಜು, ಹುಲಿಕಲ್ ರವಿಕುಮಾರ್, ಸ್ವಾಮಿ, ಜಯರಾಮ್ ಸೇರಿದಂತೆ ಹಲವಾರು ಮುಖಂಡರು ಅಭಿನಂದಿಸಿದರು.