ಕನಕಪುರ ನಗರಸಭೆಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

| Published : Sep 11 2024, 01:11 AM IST

ಸಾರಾಂಶ

ಕನಕಪುರ: ನಗರಸಭೆ ನೂತನ ಅಧ್ಯಕ್ಷರಾಗಿ ಲಕ್ಷ್ಮೀದೇವಿ, ಉಪಾಧ್ಯಕ್ಷರಾಗಿ ಸೈಯದ್ ಶಾದಿಕ್ ಅವಿರೋಧ ಆಯ್ಕೆಯಾಗಿದರು.ಮಂಗಳವಾರ ನಗರಸಭೆ ಸಭಾಂಗಣದಲ್ಲಿ ನಡೆದ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎರಡೂ ಸ್ಥಾನಕ್ಕೆ ತಲಾ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಈ ಇಬ್ಬರನ್ನು ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪ ವಿಭಾಗಾಧಿಕಾರಿ ಬಿ.ಕೆ. ಬಿನೋಯ್ ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಕನಕಪುರ: ನಗರಸಭೆ ನೂತನ ಅಧ್ಯಕ್ಷರಾಗಿ ಲಕ್ಷ್ಮೀದೇವಿ, ಉಪಾಧ್ಯಕ್ಷರಾಗಿ ಸೈಯದ್ ಶಾದಿಕ್ ಅವಿರೋಧ ಆಯ್ಕೆಯಾಗಿದರು.

ಮಂಗಳವಾರ ನಗರಸಭೆ ಸಭಾಂಗಣದಲ್ಲಿ ನಡೆದ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎರಡೂ ಸ್ಥಾನಕ್ಕೆ ತಲಾ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಈ ಇಬ್ಬರನ್ನು ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪ ವಿಭಾಗಾಧಿಕಾರಿ ಬಿ.ಕೆ. ಬಿನೋಯ್ ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ತಹಶೀಲ್ದಾರ್ ಮಂಜುನಾಥ್, ನಗರಸಭಾ ಆಯುಕ್ತ ಎಂ.ಎಸ್. ಮಹದೇವ್ ಈ ವೇಳೆ ಹಾಜರಿದ್ದರು.

ನೂತನವಾಗಿ ಅಧ್ಯಕ್ಷರಾದ ಲಕ್ಷ್ಮಿದೇವಿ ಗೋವಿಂದಪ್ಪ ಹಾಗೂ ಉಪಾಧ್ಯಕ್ಷ ಸೈಯದ್ ಶಾದಿಕ್‌ ಮಾತನಾಡಿ, ನಮ್ಮ ನಾಯಕರಾದ ಡಿ.ಕೆ. ಶಿವಕುಮಾರ್, ಡಿ.ಕೆ.ಸುರೇಶ್, ಎಸ್. ರವಿಯವರು ನಮ್ಮ ಮೇಲೆ ನಂಬಿಕೆಯಿಟ್ಟು ಈ ಸ್ಥಾನವನ್ನು ನೀಡಿರುವುದಕ್ಕೆ ಅವರಿಗೆ ಅಭಾರಿಗಳಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ನಗರಕ್ಕೆ ಅಗತ್ಯವಾಗಿ ಬೇಕಾದ ಸೌಲಭ್ಯಗಳನ್ನು ಒದಗಿಸಲು ಶ್ರಮಿಸುವ ಮೂಲಕ ನಮ್ಮ ನಾಯಕರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಗೌರವ ತಂದುಕೊಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಎಸ್. ರವಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಡಿ. ವಿಜಯದೇವ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ.ಎನ್.ದಿಲೀಪ್, ನಗರಸಭಾ ಮಾಜಿ ಅಧ್ಯಕ್ಷರಾದ ಕೋಟೆ ಕಿರಣ್, ರಾಮಚಂದ್ರ, ತಾಪಂ ಮಾಜಿ ಅಧ್ಯಕ್ಷ ಹೊಸಕೋಟೆ ಪುರುಷೋತ್ತಮ್, ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್, ಕೆಪಿಸಿಸಿ ಸದಸ್ಯೆ ರೋಹಿಣಿ, ಟಿಎಪಿಎಂಎಸ್ ಮಾಜಿ ಅಧ್ಯಕ್ಷ ತಮ್ಮಣ್ಣ ಗೌಡ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಕಬ್ಬಾಳೇಗೌಡ ನಗರಸಭಾ ಸದಸ್ಯರು, ಮುಖಂಡರು ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಕೆ ಕೆ ಪಿ ಸುದ್ದಿ 02:

ಕನಕಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮಿದೇವಿ ಅವರನ್ನು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿದರು.