ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ ಮತ್ತು ಸ್ವಾಮೀಜಿಗಳ ಸಾನಿಧ್ಯದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ನೂತನ ಜಿಲ್ಲಾಧ್ಯಕ್ಷ ಆರ್. ಮಂಜುನಾಥ್ ಆಚಾರ್ ತಿಳಿಸಿದರು.

ಕನ್ನಡಪ್ರಭ ವಾರ್ತೆ, ಚಾಮರಾಜಗರ

ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ ಮತ್ತು ಸ್ವಾಮೀಜಿಗಳ ಸಾನಿಧ್ಯದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ನೂತನ ಜಿಲ್ಲಾಧ್ಯಕ್ಷ ಆರ್. ಮಂಜುನಾಥ್ ಆಚಾರ್ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜ.೧೧ ರಂದು ಬೆಂಗಳೂರಿನಲ್ಲಿ ಕೊಪ್ಪಳ, ಕಲ್ಬುರ್ಗಿ, ಬೀದರ್, ಬೆಂಗಳೂರು ನಗರ ಮತ್ತ ಬೆಂಗಳೂರು ಗ್ರಾಮಾಂತರ ಮಹಾಸಭಾ ಪದಾಧಿಕಾರಿಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಮ್ಮ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು ಎಂದರು.

ಜಿಲ್ಲಾ ಅಧ್ಯಕ್ಷರಾಗಿ ಆಲ್.ಮಂಜುನಾಥ್ ಆಚಾರ್, ಜಿಲ್ಲಾ ಉಪಾಧ್ಯಕ್ಷರಾಗಿ ನಾಗೇಂದ್ರ ಸೋಮವಾರಪೇಟೆ, ಚಾಮರಾಜನಗರ ತಾಲ್ಲೂಕು ಯುವ ಘಟಕದ ಅಧ್ಯಕ್ಷರಾಗಿ, ವೈ.ಬಿ.ಸ್ವಾಮಿ, ಯಳಂದೂರು ತಾಲೂಕು ಅಧ್ಯಕ್ಷರಾಗಿ ಎ.ಎನ್.ನಾಗರಾಜು, ಕೊಳ್ಳೇಗಾಲ ತಾಲೂಕು ಗೌರವಾಧ್ಯಕ್ಷರಾಗಿ ಮುಳ್ಳೂರು ಪಿ.ಸಿದ್ದಪ್ಪಾಜಿ, ಹನೂರು ತಾಲೂಕು ಅಧ್ಯಕ್ಷರಾಗಿ ಮುತ್ತುರಾಜ್, ಉಪಾಧ್ಯಕ್ಷರಾಗಿ ಯೋಗೇಶ್, ಹರದನಹಳ್ಳಿ ಹೋಬಳಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಚಾರ್. ಉಪಾಧ್ಯಕ್ಷರಾಗಿ ಚನ್ನಚಾರ್, ಹರವೆ ಹೋಬಳಿ ಅಧ್ಯಕ್ಷರಾಗಿ ಟಿ.ಕೆ.ವಾಸು, ಚಂದಕವಾಡಿ ಹೋಬಳಿ ಅಧ್ಯಕ್ಷರಾಗಿ ಆರ್.ಕೆಂಪರಾಜು, ಗೌರವ ಅಧ್ಯಕ್ಷರಾಗಿ ಶಶಿಕುಮಾರ್ ಅವರುಗಳನ್ನು ಆಯ್ಕೆ ಮಾಡಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ, ಹೋಬಳಿ, ತಾಲೂಕು, ಜಿಲ್ಲಾ ಹಂತಗಳಲ್ಲಿ ಸಮಾಜದ ಬಂಧುಗಳನ್ನು ಸಂಘಟಿತರಾಗಿ ಮಾಡಲು ಶ್ರಮಿಸಲಾಗುವುದು. ನಮ್ಮ ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮತ್ತು ಎಸ್ಪಿ ಮೀಸಲಾತಿ ಹೋರಾಟ ಮಾಡುವುದರ ಮೂಲಕ ಸರ್ಕಾರದಿಂದ ಸಿಗುವ ಸೌಲಭ್ಯ ಪಡೆಯಲು ಹೋರಾಟ ರೂಪಿಸಲಾಗುವುದು ಎಂದರು.

ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ವತಿಯಿಂದ ಜನಾಂಗದ ಅಭಿವೃದ್ದಿಗಾಗಿ ೫ ಕಾರ್ಯಕ್ರಮಗಳು ರೂಪಿಸಲಾಗಿದೆ, ಬೆಂಗಳೂರು ನಗರದಲ್ಲಿ ವಿಶ್ವಕರ್ಮ ಸಮಾಜದ ಒಳಿತಿಗಾಗಿ ಸುಮಾರು ೧೦ ಎಕರೆ ಪ್ರದೇಶದಲ್ಲಿ ೫೦.೦೦೦ ಜನ ಸೇರಿಸಿ ವಿಶ್ವಕರ್ಮ ಯಾಗ ಮಾಡಲಾಗುವುದು. ಬೆಂಗಳೂರು ನಗರದಲ್ಲಿ ವಧು-ವರರ ಅನ್ವೇಷಣ ಕಾರ್ಯಕ್ರಮ ಆಯೋಜಿಸಲಾಗುವುದು. ಉಚಿತ ಉಪನಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.

ವಿಶ್ವಕರ್ಮ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗುವುದು. ವಿಶ್ವಕರ್ಮ ಸಮುದಾಯಕ್ಕೆ ಎಸ್.ಟಿ ಮೀಸಲಾತಿ ಹೋರಾಟದ ರೂಪವಾಗಿ ಸರ್ಕಾರದ ಗಮನ ಸೆಳೆಯಲು ೭೦೦ ಕಿ.ಮೀ ಒಳಗೊಂಡ ೪೫ ದಿನಗಳ ಕಾಲ ಬೀದರ್‌ನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದರು.

ಈ ಕಾರ್ಯಕ್ರಮಗಳಿಗೆ ಚಾಮರಾಜನಗರ ಜಿಲ್ಲಾ ವಿಶ್ವಕರ್ಮ ಮಹಾಸಭಾ ವತಿಯಿಂದ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಾಗೇಂದ್ರ, ಪಿ.ಸಿದ್ದಪ್ಪಾಜಿ, ಮುತ್ತುರಾಜ್, ಯೋಗೇಶ್,ಕೆಂಪರಾಜು, ಶಶಿಕುಮಾರ್, ಎ.ಎನ್.ನಾಗರಾಜು ಇದ್ದರು.