ಸಾರಾಂಶ
ಮಾಗಡಿ: ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಸಂಘಟನೆಗಾಗಿ ಹೋಬಳಿ ಮಟ್ಟದ ಪದಾಧಿಕಾರಿಗಳ ನೇಮಕ ಮಾಡಲಾಗುತ್ತಿದೆ ಎಂದು ಬಿಜೆಪಿ ಮಾಡಬಾಳು ಹೋಬಳಿ ಅಧ್ಯಕ್ಷ ಚಿಕ್ಕೆಗೌಡ ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಗೆದ್ದಿದ್ದು, ಅದೇ ರೀತಿ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಅಭ್ಯರ್ಥಿಗಳಿಗೆ ಬಲ ನೀಡುವ ನಿಟ್ಟಿನಲ್ಲಿ ಈಗಿಂದಲೇ ಪದಾಧಿಕಾರಿಗಳಿಗೆ ಪಕ್ಷದಲ್ಲಿ ಸ್ಥಾನಮಾನಗಳನ್ನು ನೀಡಿ ಅವರಿಗೆ ಜವಾಬ್ದಾರಿ ನೀಡಿ ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ಈಗಲಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದರು.ಜಿಲ್ಲಾಧ್ಯಕ್ಷ ಆನಂದ್ ಸ್ವಾಮಿ, ತಾಲೂಕು ಅಧ್ಯಕ್ಷ ವೀರಭದ್ರಯ್ಯ ಹಾಗೂ ಬಿಜೆಪಿ ಮುಖಂಡ ಪ್ರಸಾದ್ ಗೌಡ ರವರ ಮಾರ್ಗದರ್ಶನದಲ್ಲಿ ಪದಾಧಿಕಾರಿಗಳ ಪಟ್ಟಿಯನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಸರ್ಕಾರದ ಸಾಧನೆಗಳು ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆಮನೆಗೂ ತಲುಪಿಸುವ ಕೆಲಸ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡಲಾಗುತ್ತಿದ್ದು, ಯುವಕರಿಗೆ ಹೆಚ್ಚಿನ ಅವಕಾಶವನ್ನು ಕೊಡುವ ಕೆಲಸ ಮಾಡಲಾಗುತ್ತಿದೆ. ಬೂತ್ ಮಟ್ಟದಲ್ಲಿ ಯುವಕರಿಗೆ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ವಿವರಿಸಿದ್ದರು.ನೂತನ ಪದಾಧಿಕಾರಿಗಳು: ಮಾಡಬಾಳ್ ಹೋಬಳಿಯ ನೂತನ ಉಪಾಧ್ಯಕ್ಷರಾಗಿ ಬೆಳಗವಾಡಿ ಪ್ರಕಾಶ್, ಗಟ್ಟಿಪುರ ಮಹದೇವಯ್ಯ, ಕಲ್ಲರೇಪಾಳ್ಯ ರಾಮಚಂದ್ರ, ಮಂಚನಬೆಲೆ ಹನುಮಂತ ಗೌಡ, ಪ್ರಧಾನ ಕಾರ್ಯದರ್ಶಿಗಳಾಗಿ ಚಕ್ರಬಾವಿ ದರ್ಶನ್, ಪೊಲಹಳ್ಳಿ ಉಮೇಶ್, ಕಾರ್ಯದರ್ಶಿಗಳಾಗಿ ಸಿಗೆಕುಪ್ಪೆ ಹರೀಶ್, ತೂಬಿನಕೆರೆ ದಿನೇಶ್, ಬಸವೇಹಳ್ಳಿ ಕುಮಾರ್, ವೀರೇಗೌಡನ ದೊಡ್ಡಿ ವೀರೇಶ್, ಮಾಡಬಾಳ್ ಹೋಬಳಿ ರೈತ ಮೋರ್ಚಾ ಅಧ್ಯಕ್ಷ ಕಲ್ಲುದೇವನಹಳ್ಳಿ ಆನಂದ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಮರಳುದೇವನಪುರ ಚಂದ್ರು, ಉಪಾಧ್ಯಕ್ಷರಾಗಿ ಬೆಳಗವಾಡಿ ಹರೀಶ್ ಹಾಗೂ ಮಾಡಬಾಳು ಹೋಬಳಿ 25 ಬೂತ್ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ತಾಲೂಕು ಓಬಿಸಿ ಘಟಕದ ಅಧ್ಯಕ್ಷ ರಾಜಶೇಖರ್, ತಾಲೂಕು ಪ್ರಧಾನ ಕಾರ್ಯದರ್ಶಿ ಜಯರಾಂ, ಕಸಬಾ ಹೋಬಳಿಯ ಅಧ್ಯಕ್ಷ ಶಂಕರ್, ಮುಖಂಡರಾದ ಮಾಡಬಾಳ್ ರಾಮ್ ರಾವ್, ಚನ್ನಮ್ಮನಪಾಳ್ಯ ಧನಂಜಯ್ಯ ಮತ್ತಿತರರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))