ಸುಂಟಿಕೊಪ್ಪ ಹೋಬಳಿ ಕಾಂಗ್ರೆಸ್‌ ವಿವಿಧ ಘಟಕಗಳಿಗೆ ಅಧ್ಯಕ್ಷರ ಆಯ್ಕೆ

| Published : Apr 23 2024, 12:55 AM IST

ಸುಂಟಿಕೊಪ್ಪ ಹೋಬಳಿ ಕಾಂಗ್ರೆಸ್‌ ವಿವಿಧ ಘಟಕಗಳಿಗೆ ಅಧ್ಯಕ್ಷರ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಸುಂಟಿಕೊಪ್ಪ ಹೋಬಳಿ ಕಾಂಗ್ರೆಸ್ ನಗರ, ಯುವ ಘಟಕ ಹಾಗೂ ಸುಂಟಿಕೊಪ್ಪ ಪಂಚಾಯಿತಿ ಅಲ್ಪಸಂಖ್ಯಾತ ಘಟಕಗಳಿಗೆ ಅಧ್ಯಕ್ಷರನ್ನು ಆಯ್ಕೆಮಾಡಿದರು.

ಸುಂಟಿಕೊಪ್ಪ: ಸುಂಟಿಕೊಪ್ಪ ಹೊಬಳಿ ಕಾಂಗ್ರೆಸ್ ಅಧ್ಯಕ್ಷರಾಗಿ ರಜಾಕ್, ನಗರ ಅಧ್ಯಕ್ಷರಾಗಿ ರಫೀಕ್‌ ಖಾನ್ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅನೂಪ್ ಹಾಗೂ ಸುಂಟಿಕೊಪ್ಪ ಪಂಚಾಯಿತಿ ವಲಯದ ಅಲ್ಪಸಂಖ್ಯಾತ ಘಟಕಕ್ಕೆ ಅಬ್ದುಲ್ ಅಜೀಜ್ ಅವರನ್ನು ಆಯ್ಕೆಮಾಡಲಾಗಿದೆ.

ಗದ್ದೆಹಳ್ಳದ ಎಸ್.ಎಸ್. ಇಂಟರ್‌ನ್ಯಾಶನಲ್‌ ಸಭಾಂಗಣದಲ್ಲಿ ಶಾಸಕ ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು.ಈ ಸಭೆಯಲ್ಲಿ ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಸುಂಟಿಕೊಪ್ಪ ಹೋಬಳಿ ಕಾಂಗ್ರೆಸ್ ನಗರ, ಯುವ ಘಟಕ ಹಾಗೂ ಸುಂಟಿಕೊಪ್ಪ ಪಂಚಾಯಿತಿ ಅಲ್ಪಸಂಖ್ಯಾತ ಘಟಕಗಳಿಗೆ ಅಧ್ಯಕ್ಷರನ್ನು ಆಯ್ಕೆಮಾಡಿದರು.ಈ ಸಂದರ್ಭ ಸಭೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ. ಉಸ್ಮಾನ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಿವಮ್ಮ, ಸದಸ್ಯರಾದ ಸೆಬಾಸ್ಟೀನ್, ಮಾಜಿ ಸದಸ್ಯರಾದ ರೋಸ್‌ಮೇರಿ ರಾಡ್ರಿಗಸ್, ನಿರ್ಮಲಾ ಶೇಷಪ್ಪ, ರತ್ನ, ರಜಾಕ್, ಬೂತ್ ಅಧ್ಯಕ್ಷ ಶರೀಫ್‌, ಕುಶಾಲನಗರ ಬ್ಲಾಕ್ ಅಲ್ಪಸಂಖ್ಯಾತ ಘಟಕ ಅದ್ಯಕ್ಷ ಅಬ್ದುಲ್ ರಜಾಕ್, ಸುಂಟಿಕೊಪ್ಪ ನಗರ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಬ್ದುಲ್ ಅಜೀಜ್, ಎನ್‌ಎಸ್‌ಯುಐ ಘಟಕದ ಜಿಲ್ಲಾ ಉಪಾದ್ಯಕ್ಷ ಹಾರಿಸ್, ಕಾಂಗ್ರೆಸ್ ಮುಂಖಡರಾದ ಇಸಾಖ್ ಖಾನ್, ಆರ್.ಎಚ್. ಶರೀಫ್‌, ರಮೀಜ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.