ಸಕಲೇಶಪುರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ

| Published : Aug 27 2024, 01:37 AM IST

ಸಕಲೇಶಪುರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಸಕಲೇಶಪುರ ಪುರಸಭೆ ಚುನಾವಣೆಯ ವೇಳೆ ಪಕ್ಷೇತರ ಸದಸ್ಯರ ಬೆಂಬಲ ಗಳಿಸುವ ಮೂಲಕ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಜ್ಯೋತಿ ರಾಜ್‌ಕುಮಾರ್ ೧೫ ಮತಗಳಿಸಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಇವರ ಎದುರಾಳಿ ಅನ್ನಪೂರ್ಣ ಐದು ಮತ ಗಳಿಸಲಷ್ಟೆ ಶಕ್ತವಾದರು. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಝರೀನಾ ೧೫ ಮತ ಪಡೆಯುವ ಮೂಲಕ ಉಪಾಧ್ಯಕ್ಷರಾದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರೇಶ್ಮಾಭಾನು ಐದು ಮತ ಪಡೆದು ಸೋಲು ಅನುಭವಿಸಿದರು. ಬಿಜೆಪಿ ಸದಸ್ಯರು ಚುನಾವಣೆಯಿಂದ ದೂರ ಉಳಿಯುವ ಮೂಲಕ ಮೈತ್ರಿಧರ್ಮ ಪಾಲನೆಗೆ ಎಳ್ಳುನೀರು ಬಿಟ್ಟರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಜ್ಯೋತಿ ರಾಜ್‌ಕುಮಾರ್ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಝರೀನಾ ಭರ್ಜರಿ ಅಂತರದಲ್ಲಿ ಆಯ್ಕೆಯಾಗಿದ್ದಾರೆ.

೨೩ ಸದಸ್ಯ ಸ್ಥಾನದ ಪುರಸಭೆಯಲ್ಲಿ ೧೩ ಜೆಡಿಎಸ್ ಸದಸ್ಯರು ಐವರು ಕಾಂಗ್ರೆಸ್, ಮೂವರು ಬಿಜೆಪಿ ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದು, ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತರಾಗಿ ಜ್ಯೋತಿ ರಾಜ್‌ಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಝರೀನಾ ನಾಮಪತ್ರ ಸಲ್ಲಿಸಿದರೆ, ಕಾಂಗ್ರೆಸ್ ಬೆಂಬಲಿತರಾಗಿ ಅಧ್ಯಕ್ಷ ಸ್ಥಾನಕ್ಕೆ ಅನ್ನಪೂರ್ಣ ಉಮೇದುವಾರಿಕೆ ಸಲ್ಲಿಸಿದರೆ ಉಪಾಧ್ಯಕ್ಷ ಸ್ಥಾನಕ್ಕೆ ರೇಶ್ಮಾಬಾನು ನಾಮಪತ್ರ ಸಲ್ಲಿಸಿದ್ದರು.

ಚುನಾವಣೆಯ ವೇಳೆ ಪಕ್ಷೇತರ ಸದಸ್ಯರ ಬೆಂಬಲ ಗಳಿಸುವ ಮೂಲಕ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಜ್ಯೋತಿ ರಾಜ್‌ಕುಮಾರ್ ೧೫ ಮತಗಳಿಸಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಇವರ ಎದುರಾಳಿ ಅನ್ನಪೂರ್ಣ ಐದು ಮತ ಗಳಿಸಲಷ್ಟೆ ಶಕ್ತವಾದರು. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಝರೀನಾ ೧೫ ಮತ ಪಡೆಯುವ ಮೂಲಕ ಉಪಾಧ್ಯಕ್ಷರಾದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರೇಶ್ಮಾಭಾನು ಐದು ಮತ ಪಡೆದು ಸೋಲು ಅನುಭವಿಸಿದರು. ಬಿಜೆಪಿ ಸದಸ್ಯರು ಚುನಾವಣೆಯಿಂದ ದೂರ ಉಳಿಯುವ ಮೂಲಕ ಮೈತ್ರಿಧರ್ಮ ಪಾಲನೆಗೆ ಎಳ್ಳುನೀರು ಬಿಟ್ಟರು.

ತಹಸೀಲ್ದಾರ್‌ ಮೇಘನಾ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಚುನಾವಣೆ ವೇಳೆ ಮಾಜಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಜಿ.ಪಂ ಮಾಜಿ ಸದಸ್ಯೆ ಚಂಚಲ ಕುಮಾರಸ್ವಾಮಿ, ಸುಪ್ರದೀಪ್ತ್ ಯಜಮಾನ್, ಟಿಎಪಿಸಿಎಂಎಸ್ ಸದಸ್ಯ ಜಾತಹಳ್ಳಿಪುಟ್ಟಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷರಾದ ಯಾದಗಾರ್ ಇಬ್ರಾಹಿಂ, ಎಸ್.ಡಿ ಆದರ್ಶ, ಮುಖ್ಯಾಧಿಕಾರಿ ನಟರಾಜ್ ಸೇರಿದಂತೆ ಹಲವರು ಇದ್ದರು.