ಶ್ರೀಮಂಗಲ ಜೂನಿಯರ್‌ ಕಾಲೇಜು ಹಳೆ ವಿದ್ಯಾರ್ಥಿ ಸಂಘ ಪದಾಧಿಕಾರಿಗಳ ಆಯ್ಕೆ

| Published : Jan 27 2025, 12:49 AM IST

ಶ್ರೀಮಂಗಲ ಜೂನಿಯರ್‌ ಕಾಲೇಜು ಹಳೆ ವಿದ್ಯಾರ್ಥಿ ಸಂಘ ಪದಾಧಿಕಾರಿಗಳ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀಮಂಗಲ ಜೂನಿಯರ್‌ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಶ್ರೀಮಂಗಲ

ಶ್ರೀಮಂಗಲ ಜೂನಿಯರ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಮದ್ರೀರ ವಿಷ್ಣು, ಉಪಾಧ್ಯಕ್ಷರಾಗಿ ಮಚ್ಚಮಾಡ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿಯಾಗಿ ಮಚ್ಚಮಾಡ ವಿಜಯ, ಸಹಕಾರ್ಯದರ್ಶಿಗಳಾಗಿ ಮನ್ನೇರ ರಮೇಶ್, ಅಪ್ಪಂಡೆರಂಡ ಸೀತಾ ಪೊನ್ನಪ್ಪ, ಸಂಘಟನಾ ಕಾರ್ಯದರ್ಶಿಯಾಗಿ ಚೆಟ್ಟಂಗಡ ಕಂಬ ಕಾರ್ಯಪ್ಪ, ಸಹ ಸಂಘಟನಾ ಕಾರ್ಯದರ್ಶಿಗಳಾಗಿ ಚೋಡುಮಾಡ ಸೂರತ್ ಸುಬ್ಬಯ್ಯ, ಕಟ್ಟೇರ ಕುಶಾಲಪ್ಪ, ದೇಕಮಾಡ ನವೀನ್, ಚಟ್ಟಂಡ ಚರ್ಮಣ, ಖಜಾಂಚಿಯಾಗಿ ಮುಲ್ಲೇಂಗಡ ಸೋಮಯ್ಯ ಅವರನ್ನು ಅವಿರೋಧ ಆಯ್ಕೆ ಮಾಡಲಾಯಿತು.ಶ್ರೀಮಂಗಲ ವಿದ್ಯಾಸಂಸ್ಥೆಯ ಅಧ್ಯಕ್ಷ ಬೋಡಂಗಡ ಅಯ್ಯಪ್ಪ ಅಧ್ಯಕ್ಷತೆಯಲ್ಲಿ ಶ್ರೀಮಂಗಲ ಜೂನಿಯರ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮದ್ರೀರ ವಿಷ್ಣುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಲೇಜಿನ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಯಿತು.

ಮುಂದಿನ ದಿನಗಳಲ್ಲಿ ಕಾಲೇಜಿನ ಕಟ್ಟಡಗಳ ದುರಸ್ತಿಯೊಂದಿಗೆ 2027ರಲ್ಲಿ ಕಾಲೇಜಿನ ಅಮೃತ ಮಹೋತ್ಸವ ವಿಜೃಂಭಣೆಯಿಂದ ಆಚರಿಸುವಂತೆ ತೀರ್ಮಾನ ಮಾಡಲಾಯಿತು.

ಈಗಾಗಲೇ ಶೈಕ್ಷಣಿಕ ವಿಭಾಗದಲ್ಲಿ ಪ್ರೌಢಶಾಲೆಯಿಂದಲೇ ಆಂಗ್ಲ ಮಾಧ್ಯಮದಲ್ಲಿ ಅತ್ಯುತ್ತಮ ಶಿಕ್ಷಣ, ಕಂಪ್ಯೂಟರ್ ತರಬೇತಿ, ಸ್ಮಾರ್ಟ್ ಕ್ಲಾಸ್, ವ್ಯಕ್ತಿತ್ವ ವಿಕಸನಕ್ಕೆ ಸಂಬಂದಿಸಿದ ವಿವಿಧ ತರಬೇತಿಗಳು, ಓರಿಯೆಂಟೇಷನ್ ಸೇರಿದಂತೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಹಲವು ತರಗತಿಗಳು ಅತ್ಯುತ್ತಮವಾಗಿ ನಡೆಯುತ್ತಿದ್ದು, ಕಳೆದ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ ಶೇ.94, ದ್ವಿತೀಯ ಪಿಯುಸಿಯಲ್ಲಿ ಶೇ.100ರ ಫಲಿತಾಂಶ ಬಂದಿತ್ತು. ಕ್ರೀಡೆಯಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾಜ್ಯ ಮಟ್ಟವನ್ನು ಪ್ರತಿನಿಧಿಸಿದ್ದು, ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಉತ್ತಮ ಸಾಧನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇವೆಲ್ಲವನ್ನೂ ಅತ್ಯುತ್ತಮಗೊಳಿಸುವುದರೊಂದಿಗೆ ಶ್ರೀಮಂಗಲ ಜೂನಿಯರ್ ಕಾಲೇಜನ್ನು ಮಾದರಿ ವಿದ್ಯಾಸಂಸ್ಥೆಯಾಗಿ ಮಾಡಲು ಎಲ್ಲ ನಿರ್ದೇಶಕರು ಪಣತೊಡುವ ನಿರ್ಧಾರ ಮಾಡಲಾಯಿತು.ಶ್ರೀಮಂಗಲ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಬೋಡಂಗಡ ಅಯ್ಯಪ್ಪ, ಉಪಾಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ, ಕಾರ್ಯದರ್ಶಿ ಕಾಳಿಮಾಡ ಬೆಳ್ಯಪ್ಪ, ಖಜಾಂಚಿ ವಿನಯ್, ನಿರ್ದೇಶಕರಾದ ಚೆಟ್ಟಂಗಡ ಕಂಬ ಕಾರ್ಯಪ್ಪ ಹಾಗೂ ಪ್ರಾಂಶುಪಾಲ ಮುಲ್ಲೇಂಗಡ ಸೋಮಯ್ಯ ಇದ್ದರು.