ಅನುಕಂಪದ ಮೇಲಲ್ಲ, ಅಭಿವೃದ್ಧಿ ಮೇಲೆ ಚುನಾವಣೆ

| Published : Nov 09 2024, 01:09 AM IST

ಸಾರಾಂಶ

ಚನ್ನಪಟ್ಟಣ: ಇದು ಅನುಕಂಪದ ಮೇಲೆ ನಡೆಯುವ ಚುನಾವಣೆ ಅಲ್ಲ. ಅಭಿವೃದ್ಧಿ ಮೇಲೆ ನಡೆಯುವ ಚುನಾವಣೆ ‌.ರಾಜ್ಯ ಸರ್ಕಾರದಿಂದ ನಾವು ಅನುದಾನ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಆದರೆ ಕೇಂದ್ರದಿಂದ ಅನುದಾನತಂದು ಕೆಲಸ ಮಾಡುತ್ತೇವೆ ಎಂದು ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದ ವಕೀಲರ ಸಂಘ ಆಯೋಜಿಸಿದ್ದ ಸಭೆಯಲ್ಲಿ ವಕೀಲರ ಮತಯಾಚಿಸಿ ಮಾತನಾಡಿದ ಅವರು, ಇದು ನನ್ನ ಅನಿರೀಕ್ಷಿತ ಚುನಾವಣೆ. ಇನ್ನೂ 3.5 ವರ್ಷ ಮಾತ್ರ ಬಾಕಿ ಇದೆ. ನನಗೆ ಒಂದು ಅವಕಾಶ ಕೊಟ್ಟು ನೋಡಿ. ಪಕ್ಷಾತೀತವಾಗಿ ನಾನು ಮನವಿ ಮಾಡುತ್ತಿದ್ದೇನೆ. ನಿಮ್ಮ ಸಹಕಾರ ನನ್ನ ಮೇಲೆ ಇರಲಿ. ನಿಮ್ಮ ಜೊತೆ ಜೊತೆಗೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಮಂಡ್ಯದಲ್ಲಿ ಉದ್ಯೋಗ ಮೇಳೆ ಮಾಡಿದ್ದೇವೆ. ಇಡೀ ರಾಜ್ಯದ ಯುವಕರು ಉದ್ಯೋಗ ಮೇಳಕ್ಕೆ ಬಂದಿದ್ದರು.1200 ಜನರಿಗೆ ಕೆಲಸ ಕೊಡಿಸಿದ್ದೇವೆ. ಇದನ್ನು ಮುಂದುವರೆಸುತ್ತೇವೆ ಎಂದು ಭರವಸೆ ನೀಡಿದರು.

ಎಸ್‌ಟಿಗೆ ಮೀಸಲಾತಿ ಕೊಡಿಸಲು ದೇವೇಗೌಡರು ಹೋರಾಟ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಜೊತೆ ದೇವೇಗೌಡರು ಮಾತನಾಡಿದ್ದಾರೆ. ಎಲ್ಲಾ ಸಮುದಾಯಗಳು ಮುಖ್ಯವಾಹಿನಿಗೆ ಬರಬೇಕು. ಈ‌ ನಿಟ್ಟಿನಲ್ಲಿ ನಾವು ಕೆಲಸ ಮಾಡ್ತೀವಿ. ಈ ಬಾರಿ ನನ್ನ ಕೆಲಸ ನೋಡಲು ನನಗೆ ಒಂದು ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಚನ್ನಪಟ್ಟಣ ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಗಿರೀಶ್, ಉಪಾಧ್ಯಕ್ಷರಾದ ಎಸ್.ಬಿ.ಧನಂಜಯ, ಪ್ರಧಾನ ಕಾರ್ಯದರ್ಶಿ ದೇವರಾಜು ಮತ್ತಿತರರು ಇದ್ದರು.

8ಕೆಆರ್ ಎಂಎನ್ 1.ಜೆಪಿಜಿ

ಚನ್ನಪಟ್ಟಣದ ವಕೀಲರ ಸಂಘ ಆವರಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಕೀಲರ ಬಳಿ ಮತಯಾಚನೆ ಮಾಡಿದರು.