ಸಾರಾಂಶ
ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 9,62,998 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮೀನಾ ನಾಗರಾಜ್ ತಿಳಿಸಿದ್ದಾರೆ.
ಅಂತಿಮ ಮತದಾರರ ಪಟ್ಟಿ ಪ್ರಕಟ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 9,62,998 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮೀನಾ ನಾಗರಾಜ್ ತಿಳಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024, ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 4,89,590 ಮಹಿಳಾ , 4,73,377 ಪುರುಷ ಮತದಾರರು ಹಾಗೂ 31 ಇತರೆ ಮತದಾರರು ಸೇರಿ ಒಟ್ಟು 9,62,998 ಮತದಾರರಿದ್ದಾರೆ. ಜಿಲ್ಲೆಯಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದರು.ಮತದಾರರು ತಮ್ಮ ಮತದಾರರ ಚೀಟಿಯಲ್ಲಿನ ಮಾಹಿತಿ ಹೆಸರು, ತಂದೆಯ ಹೆಸರು, ಸಂಬಂಧ, ಲಿಂಗ, ಜನ್ಮ, ದಿನಾಂಕ ಮತ್ತು ಫೋಟೋ ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. 18 ವರ್ಷ ತುಂಬಿದ ಅರ್ಹ ಯುವ ಮತದಾರರ ಸೇರ್ಪಡೆಗೆ ಜಿಲ್ಲಾ ಸ್ವೀಪ್ ಸಮಿತಿಯಿಂದ ಕಾಲೇಜುಗಳಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಜಾಗೃತಿ ಮೂಡಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಜಿತೇಂದರ್ ಕುಮಾರ್ ಇದ್ದರು.
ಪೋಟೋ ಫೈಲ್ ನೇಮ್ 23 ಕೆಸಿಕೆಎಂ 2