ರಾಜ್ಯದಲ್ಲಿ ವಿದ್ಯುತ್ ಬೈಕ್ ಟ್ಯಾಕ್ಸಿ ರದ್ದು

| Published : Mar 08 2024, 01:52 AM IST / Updated: Mar 08 2024, 03:05 PM IST

ಸಾರಾಂಶ

ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ಅನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ಅನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. 

ಬೈಕ್ ಟ್ಯಾಕ್ಸಿ ಸೇವೆಯ ಅಗತ್ಯತೆ ಮತ್ತು ಜಾರಿಯ ಬಗ್ಗೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯು ಬೈಕ್ ಟ್ಯಾಕ್ಸಿ ಯೋಜನೆ ಪೂರಕವಾಗಿಲ್ಲ ಎಂದು ತಿಳಿಸಿದೆ.

ಖಾಸಗಿ ಆ್ಯಪ್ ಆಧಾರಿತ ಸಂಸ್ಥೆಗಳು ಮೋಟಾರು ವಾಹನ ಕಾಯ್ದೆ ಮತ್ತು ಅದರ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಸಾರಿಗೇತರ ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳಾಗಿ ಬಳಸುತ್ತಿವೆ. 

ಮತ್ತೊಂದೆಡೆ ಆಟೋ, ಕ್ಯಾಬ್, ಟ್ಯಾಕ್ಸಿ ಚಾಲಕರು, ಸಂಘಟನೆಗಳ ಮುಖಂಡರ ಜೊತೆ ಬೈಕ್ ಟ್ಯಾಕ್ಸಿ ಚಾಲಕರೊಂದಿಗೆ ಸಂಘರ್ಷಗಳಾಗಿವೆ. ಅಲ್ಲದೇ ಮಹಿಳೆಯರಿಗೆ ಈ ಯೋಜನೆ ಅಸುರಕ್ಷಿತವಾಗಿದೆ. 

ಈ ಹಿನ್ನೆಲೆಯಲ್ಲಿ 2021ರ ಜುಲೈನಲ್ಲಿ ಹೊರಡಿಸಲಾದ ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ಅನ್ನು ರದ್ದುಗೊಳಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.