ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗ್ಯಾರೇಜ್ ಭಸ್ಮ

| Published : Feb 04 2024, 01:30 AM IST

ಸಾರಾಂಶ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗ್ಯಾರೇಜ್ ಸುಟ್ಟು ಕರಕಲಾಗಿ ಲಕ್ಷಾಂತರ ರು. ಮೌಲ್ಯದ ವಸ್ತುಗಳು ಹಾನಿಯಾಗಿರುವ ದುರ್ಘಟನೆ ಶನಿವಾರ ಬೆ.8.30 ಗಂಟೆಗೆ ನಡೆದಿದೆ.

ಕನ್ನಡಪ್ರಭ ವಾರ್ತೆ ಅಫಜಲ್ಪುರ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗ್ಯಾರೇಜ್ ಸುಟ್ಟು ಕರಕಲಾಗಿ ಲಕ್ಷಾಂತರ ರು. ಮೌಲ್ಯದ ವಸ್ತುಗಳು ಹಾನಿಯಾಗಿರುವ ದುರ್ಘಟನೆ ಶನಿವಾರ ಬೆ.8.30 ಗಂಟೆಗೆ ನಡೆದಿದೆ. ಪಟ್ಟಣದ ಕಲಬುರಗಿ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಕರ್ನಾಟಕ ಗ್ಯಾರೇಜ್ ನಲ್ಲಿ ಬೆಳಗಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗ್ಯಾರೇಜ್ ನಲ್ಲಿರುವ ವಾಹನಗಳ ಸಲಕರಣೆಗಳು ಸುಟ್ಟು ಕರಕಲಾಗುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆಸಿ ಬೆಂಕಿ ನಂದಿಸಿದ್ದಾರೆ. ಗ್ಯಾರೇಜ್ ಮಾಲೀಕರಾದ ಎಂ.ಡಿ. ಸಲೀಮೋದ್ದಿನ್ ಮುಜಾವರ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿ, ಬೆಳಿಗ್ಗೆ ಗ್ಯಾರೇಜ್ ತೆಗೆಯಲು ಬಂದಾಗ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಇತ್ತೀಚೆಗೆ ಗ್ಯಾರೇಜ್ ಗೆ ಬೇಕಾಗುವ 25 ಲಕ್ಷಕ್ಕೂ ಹೆಚ್ಚು ಮೌಲ್ಯದ ಸಲಕರಣೆಗಳನ್ನು ತೆಗೆದುಕೊಂಡು ಬಂದು ದಾಸ್ತಾನು ಮಾಡಿಕೊಂಡಿದ್ದೆ,ಈಗ ಈ‌ ರೀತಿ ಏಕಾಏಕಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಲಕ್ಷಾಂತರ ರೂ. ಹಾನಿ ಸಂಭವಿಸಿದೆ ಹೀಗಾಗಿ ರಾಜ್ಯ ಸರ್ಕಾರ ನಮ್ಮ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗ್ಯಾರೇಜ್ ಸಂಪೂರ್ಣವಾಗಿ ಹಾಳಾಗಿದೆ. ತಕ್ಷಣ ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ ಪರಿಹಾರ ನಿಧಿ ಅಥವಾ ಬೇರೆ ಯಾವುದೇ ನಿಧಿಯಲ್ಲಿ ಆದರೂ ಸಹ ಇವರಿಗೆ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ.