ಎಲೆಕ್ಟ್ರಿಕಲ್‌ ಮೋಟಾರ್‌ ರಿವೈಂಡಿಂಗ್‌, ಪಂಪ್‌ಸೆಟ್‌ ರಿಪೇರಿ ತರಬೇತಿ ಸಮಾರೋಪ

| Published : Apr 07 2025, 12:36 AM IST

ಎಲೆಕ್ಟ್ರಿಕಲ್‌ ಮೋಟಾರ್‌ ರಿವೈಂಡಿಂಗ್‌, ಪಂಪ್‌ಸೆಟ್‌ ರಿಪೇರಿ ತರಬೇತಿ ಸಮಾರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ ಇತ್ತೀಚೆಗೆ ನೆರವೇರಿತು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಇಂದು ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ ನಮ್ಮ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಇರುವುದರಿಂದ ಜೀವನದಲ್ಲಿ ಪ್ರಸ್ತುತ ವಿದ್ಯಾಮಾನಕ್ಕೆ ಬೇಕಾದ ಕೌಶಲ್ಯ ಕಲಿಯುವುದರ ಮೂಲಕ ನಮ್ಮ ಯಶಸ್ಸು ಇರುತ್ತದೆ. ಹೊಸ ಹೊಸ ಕ್ಷೇತ್ರದಲ್ಲಿ ಉದ್ಯಮಗಳನ್ನು ಆರಂಭಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಕ್ ಕಾಲೇಜಿನ ಪ್ರಾಚಾರ್ಯ ಸಂತೋಷ ಅಭಿಪ್ರಾಯಪಟ್ಟಿದ್ದಾರೆ.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ಅವರು ಮಾತನಾಡಿದರು.

ಕೆಲವೂಂದು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಲಭವಾಗಿ ಹಣ ಮಾಡುವ ಯೋಜನೆ, ಯೋಚನೆಗಳಿಗೆ ಮಾರು ಹೋಗದೆ, ಸ್ವಯಂ ಶಿಸ್ತು ಅಳವಡಿಸಿಕೊಂಡು ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಬಹುದು. ಇದಕ್ಕೆ ಪೂರಕವಾ ರುಡ್ ಸೆಟ್ ಸಂಸ್ಥೆಯಲ್ಲಿ ಅತ್ಯತ್ತುಮ ತರಬೇತಿ ಪಡೆದುಕೊಂಡಿದ್ದೀರಿ. ಅದನ್ನು ಜೀವನದಲ್ಲಿ ಮತ್ತು ಸ್ವ ಉದ್ಯೋಗದಲ್ಲಿ ಉಪಯೋಗಿಸಿಕೊಂಡು ಯಶಸ್ಸು ಗಳಿಸಿ ಎಂದರು.

ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ.ಕರುಣಾಕರ ಜೈನ್ ನಿರೂಪಿಸಿದರು. ಅಬ್ರಹಾಂ ಜೇಮ್ಸ್ ವಂದಿಸಿದರು. ಸುಮಾರು 33 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು.