ವಿದ್ಯುತ್‌ ಶಾರ್ಟ್ ಸರ್ಕ್ಯೂಟ್: ಹುಲ್ಲಿನ ಮೆದೆ ಬೆಂಕಿಗಾಹುತಿ

| Published : Feb 24 2025, 12:35 AM IST

ಸಾರಾಂಶ

ಮೆದೆಯ ಮುಂಭಾಗ ವಿದ್ಯುತ್ ಕಂಬವಿದ್ದು ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆ ಇಡೀ ತೋಟ ಮತ್ತು ಪಕ್ಕದಲ್ಲೇ ಮನೆಯಿದ್ದುದರಿಂದ ಅದಕ್ಕೆ ಹರಡುವ ಸಾಧ್ಯತೆ ಹೆಚ್ಚಾಗಿತ್ತು,

ಕುದೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಹುಲ್ಲಿನ ಮೆದೆ ಭಸ್ಮಗೊಂಡಿರುವ ಘಟನೆ ಕುದೂರು ಹೋಬಳಿ ಕೆಂಚನಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀನಿವಾಸ್ ಅವರಿಗೆ ಸೇರಿದ ಹುಲ್ಲಿನ ಮೆದೆ ಬೆಂಕಿಗಾಹುತಿಯಾಗಿದೆ. ಒಂದು ದಿನದ ಮುಂಚೆ ರಾಗಿ ಕಣ ಮಾಡಿ ಆ ಹುಲ್ಲನ್ನು ರಾಸುಗಳಿಗಾಗಿ ಮೆದೆ ಹಾಕಲಾಗಿತ್ತು. ಮೆದೆಯ ಮುಂಭಾಗ ವಿದ್ಯುತ್ ಕಂಬವಿದ್ದು ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿದೆ. ಬೆಂಕಿಯ ಕೆನ್ನಾಲಿಗೆ ಇಡೀ ತೋಟ ಮತ್ತು ಪಕ್ಕದಲ್ಲೇ ಮನೆಯಿದ್ದುದರಿಂದ ಅದಕ್ಕೆ ಹರಡುವ ಸಾಧ್ಯತೆ ಹೆಚ್ಚಾಗಿತ್ತು, ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಈ ವಿಷಯ ತಿಳಿದ ಸ್ಥಳಕ್ಕಾಗಮಿಸಿದ ಮಾಗಡಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಒಂದೆರೆಡು ತೆಂಗಿನ ಮರಗಳು ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗಿದ್ದನ್ನು ಬಿಟ್ಟರೆ ಅದೃಷ್ಟವಶಾತ್ ಯಾವುದೇ ಅನಾಹುತ ಆಗಲಿಲ್ಲ. ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.