ಸಾರಾಂಶ
ದಾಬಸ್‍ಪೇಟೆ: ರಾಜ್ಯದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಒಡೆತನದ ಶ್ರೀ ಸಿದ್ದಾರ್ಥ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಎಲೆಕ್ಟ್ರಿಷಿಯನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದಾಬಸ್‍ಪೇಟೆ: ರಾಜ್ಯದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಒಡೆತನದ ಶ್ರೀ ಸಿದ್ದಾರ್ಥ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಎಲೆಕ್ಟ್ರಿಷಿಯನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಸಮೀಪದ ಸಿದ್ಧಾರ್ಥ ಆಸ್ಪತ್ರೆ ವಸತಿ ನಿಲಯ ಕೊಠಡಿಯಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ತಿಮ್ಮೇಗೌಡ(38) ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತ ಕಳೆದ ಕಳೆದ 6 ವರ್ಷದಿಂದ ಕಾಲೇಜಿನಲ್ಲಿ ಎಲೆಕ್ಟ್ರಿಷನ್ ಆಗಿ ಕೆಲಸ ಮಾಡುತ್ತಿದ್ದನು. ಘಟನಾ ವಿಷಯ ತಿಳಿದ ನೆಲಮಂಗಲ ಉಪವಿಭಾಗದ ಡಿವೈಎಸ್ಪಿ ಜಗದೀಶ್, ನೆಲಮಂಗಲ ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್ ನರೇಂದ್ರ ಬಾಬು ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.