ಪಾಲಾರ್ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಅಳವಡಿಕೆ: ಹಲವು ಹೋರಾಟದ ಫಲ

| Published : Mar 06 2025, 12:33 AM IST

ಪಾಲಾರ್ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಅಳವಡಿಕೆ: ಹಲವು ಹೋರಾಟದ ಫಲ
Share this Article
  • FB
  • TW
  • Linkdin
  • Email

ಸಾರಾಂಶ

ಸ್ವಾತ್ರಂತ್ರ್ಯ ಬಂದು 77 ವರ್ಷಗಳು ಕಳೆದರೂ ಕತ್ತಲಿನಲ್ಲಿಯೇ ಬದುಕು ಕಟ್ಟಿಕೊಂಡಿದ್ದ ಪಾಲಾರ್ ಗ್ರಾಮಕ್ಕೆ ಬಿಜೆಪಿ ಪಕ್ಷದ ವತಿಯಿಂದ ಹಲವು ಹೋರಾಟಗಳ ನಂತರ ವಿದ್ಯುತ್ ಸಂಪರ್ಕ ನೀಡಿರುವುದು ಸಂತಸ ತಂದಿದೆ ಎಂದು ಗ್ರಾಪಂ ಸದಸ್ಯ ನಾಗೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಸ್ವಾತ್ರಂತ್ರ್ಯ ಬಂದು 77 ವರ್ಷಗಳು ಕಳೆದರೂ ಕತ್ತಲಿನಲ್ಲಿಯೇ ಬದುಕು ಕಟ್ಟಿಕೊಂಡಿದ್ದ ಪಾಲಾರ್ ಗ್ರಾಮಕ್ಕೆ ಬಿಜೆಪಿ ಪಕ್ಷದ ವತಿಯಿಂದ ಹಲವು ಹೋರಾಟಗಳ ನಂತರ ವಿದ್ಯುತ್ ಸಂಪರ್ಕ ನೀಡಿರುವುದು ಸಂತಸ ತಂದಿದೆ ಎಂದು ಗ್ರಾಪಂ ಸದಸ್ಯ ನಾಗೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.

ಮಲೆಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಮಲೆಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳಾದ ರಸ್ತೆ, ವಿದ್ಯುತ್ ಕುಡಿಯುವ ನೀರು, ಸಾರಿಗೆ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಓಬಿಸಿ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್ ನೇತೃತ್ವದಲ್ಲಿ ಹಲವಾರು ಬಾರಿ ಪ್ರತಿಭಟನೆ ನಡೆಸಿ ಮನವಿ ಮಾಡಲಾಗಿತ್ತು.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅರಣ್ಯ ಇಲಾಖೆಯ ಸಚಿವರಾಗಿದ್ದ ಉಮೇಶ್ ಕತ್ತಿ ಅವರು ಹೊಗೇನಕಲ್ ಫಾಲ್ಸ್ ಭೇಟಿ ನೀಡಿದ್ದಾಗ ಕಾಡಂಚಿನ ಗ್ರಾಮಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಲಾಗಿತ್ತು. ಇದಾದ 3ವರ್ಷಗಳ ಬಳಿಕ ಪಾಲಾರ್ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿರುವುದು ಸ್ವಾಗತಾರ್ಹ. ಹತ್ತು ಹಲವು ಹೋರಾಟಗಳ ನಂತರ ವಿದ್ಯುತ್ ಸಂಪರ್ಕ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.

ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ನೇತೃತ್ವದಲ್ಲಿ ಪಾಲಾರ್ ಗ್ರಾಮಕ್ಕೆ ವಿದ್ಯುತ್ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಒತ್ತಾಯಿಸಿ ಪಾಲಾರ್ ಗ್ರಾಮದಿಂದ ಮಲೆಮಹದೇಶ್ವರ ಬೆಟ್ಟದ ವರೆಗೆ ಪಾದಯಾತ್ರೆ ಮಾಡಲಾಗಿತ್ತು. ಈ ಹೋರಾಟದಲ್ಲಿ ಗ್ರಾಮದ ನಿವಾಸಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಈ ಹೋರಾಟ ಹಾಗೂ ಸರ್ಕಾರದ ಸಹಕಾರದಿಂದ ವಿದ್ಯುತ್ ಸಂಪರ್ಕ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕಾಡಂಚಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡುವಂತೆ ಈ ಮೂಲಕ ಮನವಿ ಮಾಡುತ್ತೇವೆ ಎಂದರು.ಹನೂರು ಕ್ಷೇತ್ರ ವ್ಯಾಪ್ತಿಯ ಹಲವು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಜಿಲ್ಲಾ ಉಸ್ತುವಾರಿ ಸಚಿವ= ಸುರೇಶ್ ಕುಮಾರ್, ಸೋಮಣ್ಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಈಶ್ವರಪ್ಪ ಅವರ ಗಮನ ಸೆಳೆದು ಮನವಿ ಸಲ್ಲಿಸಲಾಗಿತ್ತು. ಇದಲ್ಲದೆ ಪಾಲಾರ್ ಗ್ರಾಮಕ್ಕೆ ವಿದ್ಯುತ್ ಸಂಪರ್ಕಕ್ಕೆ ಪಾದಯಾತ್ರೆ ಮಾಡಲಾಗಿತ್ತು. ಇದೀಗ ಹಾಡಿಯ ಜನರಿಗೆ ವಿದ್ಯುತ್ ಸಂಪರ್ಕ ದೊರಕಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಪ್ರಯತ್ನ ಮಾಡಲಾಗುವುದು.

-ಜನಧ್ವನಿ ಬಿ ವೆಂಕಟೇಶ್, ಜಿಲ್ಲಾಧ್ಯಕ್ಷರು, ಒಬಿಸಿ ಮೋರ್ಚಾ ಬಿಜೆಪಿ.