ವಿದ್ಯುದೀಕರಣ ಕಾಮಗಾರಿ: ಮಂಗಳೂರು-ಬೆಂಗಳೂರು ರೈಲು ಓಡಾಟದಲ್ಲಿ ವ್ಯತ್ಯಯ

| Published : Oct 28 2025, 01:00 AM IST

ವಿದ್ಯುದೀಕರಣ ಕಾಮಗಾರಿ: ಮಂಗಳೂರು-ಬೆಂಗಳೂರು ರೈಲು ಓಡಾಟದಲ್ಲಿ ವ್ಯತ್ಯಯ
Share this Article
  • FB
  • TW
  • Linkdin
  • Email

ಸಾರಾಂಶ

ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ ಮಂಗಳೂರು- ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯವಾಗಲಿದ್ದು, ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ.

ಮಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ ಮಂಗಳೂರು- ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯವಾಗಲಿದ್ದು, ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ.

ಸಕಲೇಶಪುರ ಹಾಗೂ ಸುಬ್ರಹ್ಮಣ್ ರೋಡ್ ಘಾಟ್ ಸೆಕ್ಷನ್‌ನಲ್ಲಿ ರೈಲ್ವೆ ಕಾಮಗಾರಿ ಆರಂಭಗೊಳ್ಳುತ್ತಿದೆ. ಈ ಭಾಗದಲ್ಲಿ ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನ. 2 ರಿಂದ ಆರಂಭಗೊಳ್ಳುತ್ತಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಹಲವು ರೈಲು ಸೇವೆ ರದ್ದಾಗುತ್ತಿದೆ. ಈ ಕುರಿತು ನೈಋತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ.

ಯಾವ ರೈಲು ಸೇವೆ ರದ್ದು?: 1. ರೈಲು ಸಂಖ್ಯೆ 16539 ಯಶವಂತಪುರ–ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಮೊದಲು ನ.1ರ ವರೆಗೆ ರದ್ದುಗೊಂಡಿತ್ತು. ಈಗ ಡಿ. 13ರ ವರೆಗೆ ರದ್ದುಗೊಳ್ಳಲಿದೆ.2. ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಮೊದಲು ನ. 2 ರ ವರೆಗೆ ರದ್ದುಗೊಂಡಿತ್ತು. ಈಗ ಡಿ. 14ರ ವರೆಗೆ ರದ್ದುಗೊಳ್ಳಲಿದೆ.

3. ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈನ್-ವೀಕ್ಲಿ ಎಕ್ಸ್‌ಪ್ರೆಸ್ ಮೊದಲು ಅ. 30 ರ ವರೆಗೆ ರದ್ದುಗೊಂಡಿತ್ತು. ಈಗ ಡಿ. 14ರ ವರೆಗೆ ರದ್ದುಗೊಳ್ಳಲಿದೆ.

4. ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್–ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ ಮೊದಲು ಅ. 30ರ ವರೆಗೆ ರದ್ದುಗೊಂಡಿತ್ತು. ಡಿ. 15 ರ ವರೆಗೆ ರದ್ದುಗೊಳ್ಳಲಿದೆ.

5. ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ ಮೊದಲು ಅ. 31 ರವರೆಗೆ ರದ್ದುಗೊಂಡಿತ್ತು. ಈಗ ಡಿ. 15ರ ವರೆಗೆ ರದ್ದುಗೊಳ್ಳಲಿದೆ.

6. ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ ಮೊದಲು ನ. 1ರ ವರೆಗೆ ರದ್ದುಗೊಂಡಿತ್ತು. ಈಗ ಡಿ. 16ರ ವರೆಗೆ ರದ್ದುಗೊಳ್ಳಲಿದೆ.

ಭಾರಿ ಮಳೆಯ ಕಾರಣ ರದ್ದಾಗಿದ್ದ ಮಂಗಳೂರು- ಬೆಂಗಳೂರು ಬೆಳಗಿನ ರೈಲುಗಳ ರದ್ದು ನಿರ್ಧಾರವನ್ನು ಸಪ್ಟೆಂಬರ್‌ನಲ್ಲಿ ವಿಸ್ತರಣೆ ಮಾಡಲಾಗಿತ್ತು. ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಈ ರೈಲು ಸಂಚಾರವನ್ನು ಡಿ. 16ರ ವರೆಗೆ ರದ್ದು ಮಾಡಲಾಗಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.