ಧಾರವಾಡದ ಇಟಿಗಟ್ಟಿಯಲ್ಲಿ ಎಲೆಕ್ಟ್ರಾನಿಕ್ಸ್‌ ಎಸ್‌ಇಝಡ್‌

| Published : Aug 14 2025, 01:00 AM IST

ಸಾರಾಂಶ

ಇಲ್ಲಿನ ಇಟ್ಟಿಗಟ್ಟಿಯಲ್ಲಿ ಎಲೆಕ್ಟ್ರಾನಿಕ್ಸ್‌ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (ಎಸ್‌ಇಝಡ್)ವನ್ನು ಕೇಂದ್ರ ಸರ್ಕಾರ ಘೋಷಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

- 28 ಎಕರೆ ಪ್ರದೇಶದಲ್ಲಿ ಸ್ಥಾಪನೆ । ಕೇಂದ್ರ ಘೋಷಣೆ

===

ಕನ್ನಡಪ್ರಭ ವಾರ್ತೆ ಧಾರವಾಡಇಲ್ಲಿನ ಇಟ್ಟಿಗಟ್ಟಿಯಲ್ಲಿ ಎಲೆಕ್ಟ್ರಾನಿಕ್ಸ್‌ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (ಎಸ್‌ಇಝಡ್)ವನ್ನು ಕೇಂದ್ರ ಸರ್ಕಾರ ಘೋಷಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಭಾಗದಲ್ಲಿ ಎಲೆಕ್ಟ್ರಾನಿಕ್ಸ್ ಘಟಕಗಳ ಅವಶ್ಯಕತೆಯನ್ನು ಮನಗಂಡು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್‌ ಗೋಯಲ್ ಅವರಿಗೆ ವಿಶೇಷ ಆರ್ಥಿಕ ವಲಯ ಸ್ಥಾಪಿಸುವಂತೆ ನಾನು ಮನವಿ ಮಾಡಿದ್ದೆ. ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು, ಎಲೆಕ್ಟ್ರಾನಿಕ್ಸ್‌ ಘಟಕಗಳಿಗಾಗಿ ಇಟ್ಟಿಗಟ್ಟಿಯಲ್ಲಿ ವಿಶೇಷ ಆರ್ಥಿಕ ವಲಯವನ್ನು ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.ಒಟ್ಟು 391 ಎಕರೆ ಭೂಮಿಯನ್ನು ಹೊಂದಿರುವ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್‌ ಪೈಕಿ 28 ಎಕರೆ ಭೂಮಿಯನ್ನು ಇಟಿಗಟ್ಟಿಯ ಎಲೆಕ್ಟ್ರಾನಿಕ್ಸ್ ವಿಶೇಷ ಆರ್ಥಿಕ ವಲಯ ಎಂದು ಘೋಷಿಸಲಾಗಿದೆ. ಅವಳಿ ನಗರದ ಕೈಗಾರಿಕಾ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಉತ್ಪಾದನೆಗೆ ಈ ವಿಶೇಷ ಆರ್ಥಿಕ ವಲಯ ಉತ್ತೇಜನ ನೀಡಲಿದೆ. ಇದು ಹುಬ್ಬಳ್ಳಿಯನ್ನು ಜಾಗತಿಕ ಎಲೆಕ್ಟ್ರಾನಿಕ್ಸ್ ಉತ್ಪಾದನೆಯ ಶಕ್ತಿಕೇಂದ್ರವಾಗಿ ಪರಿವರ್ತಿಸುವ ನಿರ್ಣಾಯಕ ಹೆಜ್ಜೆಯಾಗಲಿದೆ ಎಂದು ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.