ಸಾರಾಂಶ
ರಾಮಾಯಣ ಮಹಾಕಾವ್ಯವು ಇವರ ಕವಿತ್ವ ಭಾವನೆಯ ಕೊಡುಗೆಯಾಗಿದೆ
ಯಲಬುರ್ಗಾ: ವಾಲ್ಮೀಕಿ ರಚಿತ ರಾಮಾಯಣ ಮಹಾಕಾವ್ಯದಲ್ಲಿ ಉಲ್ಲೇಖಿತ ಅಂಶಗಳು ಎಂದಿಗೂ ಪ್ರಸ್ತುತವಾಗಿದೆ ಎಂದು ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಹೇಳಿದರು.
ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.ನಿಕಟ ಸಂಪರ್ಕ ಹೊಂದಿದ್ದ ವಾಲ್ಮೀಕಿ ಅವರಲ್ಲಿ ಕವಿತ್ವ ಭಾವನೆ ಇತ್ತು. ರಾಮಾಯಣ ಮಹಾಕಾವ್ಯವು ಇವರ ಕವಿತ್ವ ಭಾವನೆಯ ಕೊಡುಗೆಯಾಗಿದೆ. ಭ್ರಾತೃತ್ವ ಭಾವನೆ, ರಾಜನೀತಿ, ಮಾನವೀಯ ಮೌಲ್ಯ, ಪ್ರಜಾಪ್ರಭುತ್ವವನ್ನು ರಾಮಾಯಣದ ಮೂಲಕ ಪರಿಚಯಿಸಿದ್ದಾರೆ ಎಂದರು.
ಪಪಂ ಸದಸ್ಯ ವಸಂತ ಭಾವಿಮನಿ, ತಹಸೀಲ್ದಾರ್ ಬಸವರಾಜ ತೆನ್ನಳ್ಳಿಯಿಂದ ವಾಲ್ಮೀಕಿ ತಪೋವನ ನಿರ್ಮಾಣಕ್ಕೆ ಭೂಮಿ ಪೂಜೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕಾಧ್ಯಕ್ಷ ಮಾನಪ್ಪ ಪೂಜಾರ, ಪಪಂ ಸದಸ್ಯ ರೇವಣಪ್ಪ ಹಿರೇಕುರುಬರ, ಹನುಮಂತ ಭಜಂತ್ರಿ, ಮುಖ್ಯಾಧಿಕಾರಿ ನಾಗೇಶ, ತಾಪಂ ಇಒ ನೀಲಗಂಗಾ ಬಬಲಾದ, ಪಿಎಸ್ಐ ವಿಜಯ ಪ್ರತಾಪ, ಹನುಮಂತಪ್ಪ ಕುರಿ, ಅಶೋಕ ಮಾಲಿಪಾಟೀಲ್, ಭೀಮಣ್ಣ ಹವಳಿ, ಶ್ರೀಕಾಂತಗೌಡ ಮಾಲಿಪಾಟೀಲ್, ಗುಂಡನಗೌಡ ಸಾಲಭಾವಿ, ಬಸವರಾಜ ಜಂಬಾಳಿ, ಶಂಕ್ರಪ್ಪ ಶಾಖಾಪುರ, ಶಿವಪ್ಪ ಯಲಬುರ್ಗಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಮತ್ತಿತರರು ಇದ್ದರು.