ಸಾರಾಂಶ
ಹುಸಣೆಪಾಳ್ಯ ಬಳಿ ಘಟನೆ, ಮೂವರು ವಾಚರ್‌ಗಳಿಗೆ ಗಾಯಕನ್ನಡಪ್ರಭ ವಾರ್ತೆ ಹನೂರು
ಅರಣ್ಯ ಇಲಾಖೆ ಸಿಬ್ಬಂದಿಗೆ ಆನೆ ದಾಳಿ ನಡೆಸಿರುವ ಘಟನೆ ಹನೂರು ತಾಲೂಕಿನ ಪಿ.ಜಿ ಪಾಳ್ಯ ಸಮೀಪದ ಹುಸಣೆಪಾಳ್ಯ ಬಳಿ ಗುರುವಾರ ನಡೆದಿದೆ.ಬಿಆರ್ ಟಿ ಸುರಕ್ಷಿತ ಪ್ರದೇಶದ ಪಿ.ಜಿ.ಪಾಳ್ಯ ವಲಯದ ಹೊರಗುತ್ತಿಗೆ ವಾಚರ್ ಗಳಾದ ಮುನಿಯಪ್ಪ (33), ಜಡೇಸ್ವಾಮಿ(27) ಹಾಗೂ ನಾಗರಾಜು(36) ಎಂಬುವರು ಗಾಯಗೊಂಡವರು.
ತಾಲೂಕಿನ ಪಿ.ಜಿ.ಪಾಳ್ಯ ಸಮೀಪದ ಹುಸಣೆಪಾಳ್ಯಬಳಿ ರಾತ್ರಿ ಪಾಳಿಯದಲ್ಲಿ ಒಂಬತ್ತು ಗಂಟೆ ಸಮಯದಲ್ಲಿ ಗುರುವಾರ ತಡರಾತ್ರಿ ಜಮೀನುಗಳಿಗೆ ಆನೆ ನುಗ್ಗುವುದನ್ನು ತಪ್ಪಿಸಲು ಗಸ್ತಿಗೆ ತೆರಳಿದ್ದ ವೇಳೆ ಆನೆ ಅರಣ್ಯ ಇಲಾಖೆಯ ಮೂವರು ವಾಚರ್ ಗಳ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ.ಮಲೆ ಮಹದೇಶ್ವರ ವನ್ಯಜೀವಿಧಾಮದಿಂದ ಆಹಾರ ಅರಸಿ ಜಮೀನುಗಳತ್ತ ನುಗ್ಗುವ ಆನೆಗಳನ್ನು ಕಾಡಿಗೆ ಓಡಿಸಲು ಇವರು ತೆರಳಿದ್ದ ವೇಳೆ ಏಕಾಏಕಿ ಆನೆ ದಾಳಿ ನಡೆಸಿದೆ. ಮುನಿಯಪ್ಪ ಮೇಲೆ ದಾಳಿ ಮಾಡಿ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಜಡೆಸ್ವಾಮಿಯನ್ನು ಓಡಿಸಿಕೊಂಡು ಹೋದ ವೇಳೆ ಗುಂಡಿಯೊಳಕ್ಕೆ ಬಿದ್ದು ಕಾಲು ಮುರಿದಿದೆ. ಮಂಡಿ ಚಿಪ್ಪು ಸಹ ತೀವ್ರವಾಗಿ ಗಾಯಗೊಂಡು ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ, ನಾಗರಾಜು ಎಂಬವರಿಗೆ ಎಡಗೈ ಗಾಯವಾಗಿದೆ.ಮೂವರಿಗೂ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಟ್ಟು ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಿತಿಮೀರಿದ ಆನೆ ಹಾವಳಿ ಆತಂಕದಲ್ಲಿ ಗ್ರಾಮಸ್ಥರು ಲೋಕ್ಕನಹಳ್ಳಿ ಆಂಡಿಪಾಳ್ಯ ಬೈಲೂರು ಪಿ ಜಿ ಪಾಳ್ಯ ಒಡೆಯರ್ ಪಾಳ್ಯ ಗುಂಡಿಮಾಳ ಅರಣ್ಯದಂಚಿನ ಜಮೀನುಗಳಲ್ಲಿ ರೈತರ ಫಸಲು ನಾಶಗೊಳಿಸಿ ಆತಂಕಕ್ಕೀಡಾಗಿದ್ದ ರೈತರಿಗೆ ಅರಣ್ಯ ಅಧಿಕಾರಿಗಳು ಆನೆಗಳನ್ನು ರಾತ್ರಿ ವೇಳೆ ಓಡಿಸಲು ಈ ಭಾಗದಲ್ಲಿ ರಾತ್ರಿ ಪಾಳಿಯದಲ್ಲಿ ಕರ್ತವ್ಯ ನಿರ್ವಹಿಸಲು ತೆರಳಿದ್ದ ವೇಳೆ ಕಾಡಾನೆ ದಾಳಿಯಿಂದ ಮೂವರು ಅರಣ್ಯ ಇಲಾಖೆ ಸಿಬ್ಬಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವುದು ಈ ಭಾಗದ ರೈತರು ಹಾಗೂ ಅರಣ್ಯದಂಚಿನ ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.ಭಯದ ವಾತಾವರಣದಲ್ಲಿರುವ ನಿವಾಸಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮದೊಂದಿಗೆ ಕಾಡುಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಲು ಶಾಶ್ವತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಕಾಡಾನೆ ದಾಳಿಯಿಂದ ಮೂವರು ಅರಣ್ಯ ಇಲಾಖೆ ಸಿಬ್ಬಂದಿ ಗಾಯಗೊಂಡು ಚಿಕಿತ್ಸೆ ನೀಡಲು ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಾಣಾಯಾಪದಿಂದ ಅರಣ್ಯ ಇಲಾಖೆ ಸಿಬ್ಬಂದಿ ಪಾರಾಗಿದ್ದಾರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವರಾಂ ವಲಯ ಅರಣ್ಯ ಅಧಿಕಾರಿ ಪಿಜಿ ಪಾಳ್ಯ