ಸಾರಾಂಶ
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ವತಿಯಿಂದ ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರ ಪರವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ ಬಾಕಿ ವೇತನ ಪಾವತಿಗಾಗಿ ಆಗ್ರಹಿಸಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ ಹನ್ನೊಂದನೆಯ ದಿನ ಪೂರೈಸಿತು.
ತರಗತಿ ಬಹಿಷ್ಕಾರ ಮಾಡಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದು, ಇನ್ನೂ ಕೂಡ ಬಾಕಿ ವೇತನ ಪಾವತಿಯಾಗಿಲ್ಲ. ಇದರಿಂದ ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದು ಕಡೆಯಲ್ಲಿ ವಿದ್ಯಾರ್ಥಿಗಳಿಗೂ ಕೂಡ ತರಗತಿ ನಡೆಯದೆ ಸಮಸ್ಯೆ ಎದುರಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ವತಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರ ಪರವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಮತ್ತು ಪದಾಧಿಕಾರಿಗಳು ಹಾಜರಿದ್ದರು.ಪೋಸ್ಟರ್ ಬಿಡುಗಡೆ;
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮ್ತತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಇವರ ಸಹಯೋಗದಲ್ಲಿ ‘ಬೇಟಿ ಬಚಾವೋ ಬೇಟಿ ಪಡಾವೋ’ ಕಾರ್ಯಕ್ರಮದ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ವೆಂಕಟರಾಜ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಬಿಡುಗಡೆಗೊಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಆನಂದ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್, ಮಹಿಳೋದಯ ಒಕ್ಕೂಟದ ಸಂಚಾಲಕಿ ಜಾಯ್ಸಿ ಮೆನೆಜಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಹಾಜರಿದ್ದರು.