ಸಾರಾಂಶ
ಚಿಕ್ಕಮಗಳೂರಿನಲ್ಲಿ ಎತ್ತಿನಗಾಡಿ ಜಾಥ ಮೂಲಕ ಅರಿವು । ಲೈಫ್ ಲೈನ್ ಫೀಡ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧನೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಪ್ರತಿಯೊಬ್ಬ ಅರ್ಹ ಮತದಾರರು ಲೋಕಸಭಾ ಸಾರ್ವತ್ರಿಕ ಚುನಾವಣೆ ದಿನದಂದು ಮತದಾನ ಕೇಂದ್ರಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರಸಭೆಯಿಂದ ಸೋಮವಾರ ನಗರದ ಶ್ರೀ ಬೋಳ ರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಮತದಾನ ಜಾಗೃತಿಗೆ ಏರ್ಪಡಿಸಿದ್ದ ಎತ್ತಿನಗಾಡಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಮತದಾರರು ಯಾವುದೇ ಆಸೆ ಆಮಿಷ ಹಾಗೂ ಬೆದರಿಕೆಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರ ಕೂಡ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು. ಪ್ರತಿಯೊಬ್ಬರು ಯೋಚಿಸಿ ಮತ ಚಲಾಯಿಸ ಬೇಕು ಎಂದ ಅವರು, ಕಳೆದ ಚುನಾವಣೆಯಲ್ಲಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿದ್ದು, ಈ ಬಾರಿ ಎಲ್ಲ ಅರ್ಹ ಮತದಾರರು ಏಪ್ರಿಲ್ 26 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು.ಜಿಲ್ಲೆಯಲ್ಲಿ ಶೇ.90 ಕ್ಕೂ ಹೆಚ್ಚು ಮತದಾನವಾಗಬೇಕು. ಮತದಾನದ ಕುರಿತು ಜಿಲ್ಲಾ ಸ್ವೀಪ್ ಸಮಿತಿಯಿಂದ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದ್ದು, ಈ ಬಾರಿ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು.
ಜಾಥದಲ್ಲಿ ಚಿಕ್ಕಮಗಳೂರು ನಗರಸಭೆಯ ಪೌರಾಯುಕ್ತ ಕೃಷ್ಣಮೂರ್ತಿ, ನಗರಸಭೆ ಅಧಿಕಾರಿ ಸಿಬ್ಬಂದಿ ಪಾಲ್ಗೊಂಡಿದ್ದರು.---- ಬಾಕ್ಸ್ ----ಎಲ್ಲರೂ ಮತದಾನದಲ್ಲಿ ಖುಷಿಯಿಂದ ಭಾಗವಹಿಸಿಚಿಕ್ಕಮಗಳೂರು: ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಿದ್ದಂತೆ, ಎಲ್ಲರೂ ಮತದಾನದಲ್ಲಿ ಖುಷಿಯಿಂದ ಭಾಗವಹಿಸಬೇಕು ಎಂದು ಜಿಪಂ ಸಿಇಓ ಡಾ. ಗೋಪಾಲಕೃಷ್ಣ ಹೇಳಿದ್ದಾರೆ.
ಅಂಬಳೆ ಕೈಗಾರಿಕಾ ಕೇಂದ್ರದ ಲೈಫ್ ಲೈನ್ ಫೀಡ್ಸ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಆಯೋಜಿಸ ಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಾರ್ಮಿಕರಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ವಾಣಿಜ್ಯ ಕೈಗಾರಿಕೆ ಇಲಾಖೆ ಉಪ ನಿರ್ದೇಶಕ ರವಿ ಪ್ರಸಾದ್ ಎಲ್ಲರನ್ನು ಸ್ವಾಗತಿಸಿದರು. ಗ್ರಾಮೀಣ ಕೈಗಾರಿಕೆ ಉಪ ನಿರ್ದೇಶಕ ಉಮೇಶ್, ಕೈಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ವಂದಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸಿದ್ದರಾಜು, ಕಾರ್ಮಿಕ ಅಧಿಕಾರಿ ರವಿಕುಮಾರ್, ಆಯುಷ್ ಅಧಿಕಾರಿ ಗೀತಾ, ಲೈಫ್ ಲೈನ್ ಪೀಡ್ಸ್ ಸಂಸ್ಥೆಯ ಎಜಿಎಂ ದಿನೇಶ್ ಉಪಸ್ಥಿತರಿದ್ದರು.-----
ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಚಿಕ್ಕಮಗಳೂರು: ಏಪ್ರಿಲ್ 26 ರಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅಂದು ಸಾರ್ವಜನಿಕ ಶಾಂತಿ ಹಾಗೂ ಕಾನೂನು ವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಏಪ್ರಿಲ್ 24 ರ ಸಂಜೆ 5 ಗಂಟೆ ಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.ಎಲ್ಲಾ ನಮೂನೆಯ ಮಧ್ಯದಂಗಡಿಗಳನ್ನು ಮುಚ್ಚುವಂತೆ ಹಾಗೂ ಮದ್ಯ, ಬೀರ್, ಮದ್ಯಸಾರ ಇತ್ಯಾದಿ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
8 ಕೆಸಿಕೆಎಂ 4ಚಿಕ್ಕಮಗಳೂರಿನಲ್ಲಿ ಸೋಮವಾರ ಎತ್ತಿನಗಾಡಿ ಜಾಥದ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಜಿಪಂ ಸಿಇಓ ಡಾ. ಗೋಪಾಲಕೃಷ್ಣ, ಎಡಿಸಿ ನಾರಾಯಣ ರಡ್ಡಿ ಕನಕ ರಡ್ಡಿ ಇದ್ದರು.