ಸಾರಾಂಶ
ಕನ್ನಡಪ್ರಭ ವಾರ್ತೆ ಮಾಲೂರು
ಪ್ರತಿಯೊಬ್ಬ ನಾಗರಿಕರು ಸಮಾಜದಲ್ಲಿ ತಮ್ಮ ಮಕ್ಕಳಿಗೆ ಸರ್ಕಾರದಿಂದ ಶಿಕ್ಷಣ ಕಾಯ್ದೆಯಡಿ ನೀಡುವ ಉಚಿತ ಶಿಕ್ಷಣವನ್ನು ಪ್ರೋತ್ಸಾಹಿಸುವ ಮೂಲಕ ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ತೊಲಗಿಸಬೇಕು, ಬಾಲ ಕಾರ್ಮಿಕ ಪದ್ಧತಿಯಿಂದ ವಿಮುಕ್ತಿಗೊಳಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಶೈಲ ಎಸ್. ಎಂ. ಹೇಳಿದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಾಲೂಕು ಕಾನೂನು ಸೇವೆಗಳ ಸಮಿತಿ, ಕಾರ್ಮಿಕರ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಾಲಾ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆಯಿಂದ ಆರಳೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ತಾಲೂಕು ಮಟ್ಟದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ, ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ೬ ರಿಂದ ೧೪ ವರ್ಷದ ಮಕ್ಕಳನ್ನು ಕಾರ್ಮಿಕರಾಗಿ ದುಡಿಸಿಕೊಳ್ಳುವುದನ್ನು ನಿಷೇಧಿಸಿದ್ದು, ಪ್ರತಿಯೊಬ್ಬ ನಾಗರಿಕನೂ ಸಮಾಜದಲ್ಲಿ ತಮ್ಮ ಮಕ್ಕಳಿಗೆ ಸರ್ಕಾರದಿಂದ ಶಿಕ್ಷಣ ಕಾಯ್ದೆಯಡಿ ನೀಡುವ ಉಚಿತ ಶಿಕ್ಷಣವನ್ನು ಪ್ರೋತ್ಸಾಹಿಸುವ ಮೂಲಕ ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ತೊಲಗಿಸಬೇಕು ಎಂದರು.
ಬಾಲಕರನ್ನು ಕಾರ್ಮಿಕ ಪದ್ಧತಿಯಿಂದ ವಿಮುಕ್ತಿಗೊಳಿಸಬೇಕು ಎಂದ ನ್ಯಾಯಾಧೀಶರು, ಬಾಲಕಾರ್ಮಿಕರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ದುಡಿಮೆ ಮಾಡುತ್ತಿದ್ದಾರೆ. ಸಾರ್ವಜನಿಕರು ಅಂತಹ ಮಕ್ಕಳ ಬಗ್ಗೆ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿದಾಗ ಮಾತ್ರ ಬಾಲ ಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.ಪ್ರತಿಯೊಬ್ಬ ನಾಗರಿಕನೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನ ಆಗುವ ಹಾಗೆ ನೋಡಿಕೊಳ್ಳಬೇಕು. ಶಿಕ್ಷಣದಿಂದ ಯಾರು ವಂಚಿತರಾಗದಂತೆ ನೋಡಿಕೊಳ್ಳಬೇಕು. ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸದಸ್ಯರು, ನಾಗರಿಕರು, ಶಾಲೆ ಬಿಟ್ಟ ಮಕ್ಕಳನ್ನು ಪೋಷಕರ ಮನವೊಲಿಸಿ ಶಾಲೆಗೆ ಕರೆತರುವ ಕೆಲಸ ಮಾಡಬೇಕು ಎಂದರು.
ತಾಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ ಮಾತನಾಡಿದರು.ಜೆಎಂಎಫ್ ಸಿ ನ್ಯಾಯಾಲಯದ ೨ನೇ ಅಪರ ಸಿವಿಲ್ ನ್ಯಾಯಾಧೀಶ ರಹಿಲ, ಸಭಾ ಕಾರ್ಮಿಕ ನಿರೀಕ್ಷಕ ರೇಣುಕಾ ಪ್ರಸನ್ನ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೈರಾರೆಡ್ಡಿ, ಅರಳೇರಿ ಗ್ರಾಂ ಸದಸ್ಯ ರಾಜೇಂದ್ರಪ್ಪ, ವನಿತಾ, ಎನ್, ಎಸ್ಡಿಎಂಸಿ ಅಧ್ಯಕ್ಷ ವೇಣುಗೋಪಾಲ್, ವಕೀಲರ ಸಂಘದ ಕಾರ್ಯದರ್ಶಿ ಕೆ ಹರೀಶ್, ಜಂಟಿ ಕಾರ್ಯದರ್ಶಿ ಬಿ. ನಾರಾಯಣಸ್ವಾಮಿ, ಇತಿಹಾಸ ವಿಭಾಗದ ಪ್ರಾಧ್ಯಾಪಕ ಶ್ರೀಕಾಂತ್, ಬಿಆರ್ಪಿ ಶಾಲಾ ಶಿಕ್ಷಣ ಇಲಾಖೆ ನಂಜುಂಡೇಗೌಡ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸರಸ್ವತಮ್ಮ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಡಿಕೆ ಸರಸ್ವತಮ್ಮ, ವಕೀಲರಾದ ಅಂಗಸಗಿರಿಯಪ್ಪ, ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಸಹಾಯಕ ಪ್ರಾಧ್ಯಾಪಕ ಡಿ. ಎನ್. ಶ್ರೀಧರ್, ಸಹ ಪ್ರಾಧ್ಯಾಪಕಿ ವರಲಕ್ಷ್ಮೀ, ಇನ್ನಿತರರು ಹಾಜರಿದ್ದರು.