ಕಡೂರುದೇಶದಲ್ಲಿ ಶಾಶ್ವತ ಅಂಗವಿಕಲತೆಯನ್ನು ಹೋಗಲಾಡಿಸಲು ಪ್ರತಿಯೊಂದು ಮಗುವಿಗೆ ಪೋಲಿಯೋ ಲಸಿಕೆ ಹಾಕಿಸುವುದು ಕಡ್ಡಾಯ ಎಂದು ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಹೇಳಿದರು.

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ಕಡೂರು

ದೇಶದಲ್ಲಿ ಶಾಶ್ವತ ಅಂಗವಿಕಲತೆಯನ್ನು ಹೋಗಲಾಡಿಸಲು ಪ್ರತಿಯೊಂದು ಮಗುವಿಗೆ ಪೋಲಿಯೋ ಲಸಿಕೆ ಹಾಕಿಸುವುದು ಕಡ್ಡಾಯ ಎಂದು ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂದೆ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಈಗಾಗಲೇ ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ ಹೊರ ರಾಷ್ಟ್ರಗಳಲ್ಲಿ ಪೋಲಿಯೋ ಪ್ರಕರಣಗಳು ದಾಖಲಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮಕ್ಕಾಗಿ ಪೋಲಿಯೋ ಲಸಿಕೆ ಕಾರ್ಯಕ್ರಮ ದೇಶದಾದ್ಯಂತ ನಡೆಯುತ್ತಿದೆ. ಸಾರ್ವಜನಿಕರು, ಸಂಘ, ಸಂಸ್ಥೆಗಳು ಸಾರ್ವಜನಿಕ ಆಸ್ಪತ್ರೆ ಈ ಅಭಿಯಾನಕ್ಕೆ ಸಹಕಾರ ನೀಡಿದ್ದು ಕಾರ್ಯಕ್ರಮ ಯಶಸ್ವಿಯಾಗಲಿ ಎಂದರು. ಕಡೂರು ತಾಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್ ದತ್ತಾತ್ರಿ ಮಾತನಾಡಿ, ದೇಶದಲ್ಲಿ 1995 ರಲ್ಲಿ ಪೋಲಿಯೋ ಲಸಿಕೆ ಕಾರ್ಯಕ್ರಮ ಆರಂಭಿಸಲಾಗಿದ್ದು ಅಂದು ದೇಶದಲ್ಲಿ 1.5 ಲಕ್ಷ ಮಕ್ಕಳು ಪೋಲಿಯೋ ಪೀಡಿತರಾಗಿದ್ದರು. ಆಗ ಭಾರತ ಸರ್ಕಾರ,ಆರೋಗ್ಯ ಇಲಾಖೆ ಸಂಘ ಸಂಸ್ಥೆಗಳ ಸಹಕಾರದಿಂದ 2015ರಲ್ಲಿ ಭಾರತವು ಪೋಲಿಯೋ ಮುಕ್ತ ರಾಷ್ಟ್ರವಾಗಿ ಹೊರಹೊಮ್ಮಿದೆ.ಭಾರತದಲ್ಲಿ 2010ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕೊನೆ ಬಾರಿ ಕೇಸ್ ದಾಖಲಾಗಿದ್ದು ನಂತರ ಎಲ್ಲಿಯೂ ಪೋಲಿಯೋ ಪ್ರಕರಣಗಳು ಕಂಡು ಬಂದಿಲ್ಲ ಎಂದು ಮಾಹಿತಿ ನೀಡಿದರು. ಕರ್ನಾಟಕ ರಾಜ್ಯದಲ್ಲಿ 1998 ರಲ್ಲಿ 70 ಪ್ರಕರಣಗಳು ದಾಖಲಾಗಿತ್ತು. 2008 ರಲ್ಲಿ ರಾಜ್ಯದಲ್ಲಿ ಯಾವುದೇ ಪ್ರಕರಣ ಇಲ್ಲದಂತೆ ತಡೆಗಟ್ಟ ಲಾಗಿದೆ. ಸಾರ್ವಜನಿಕರ ಸಹಕಾರ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮದಿಂದ ಸಾಧ್ಯವಾಗಿದೆ ಎಂದರು.ಕಡೂರು ತಾಲೂಕಿನಲ್ಲಿ ಮುಂದಿನ 4 ದಿನಗಳ ಕಾಲ ಅಭಿಯಾನ ನಡೆಯಲಿದ್ದು 16 ಸಾವಿರ ಮಕ್ಕಳನ್ನು ಗುರುತಿಸಿದ್ದು ಅವರೆಲ್ಲರಿಗೂ ಲಸಿಕೆ ಹಾಕಲು ಈಗಾಗಲೆ 640 ಜನ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಭೂತ್‌ಗಳನ್ನು ತೆರೆಯಲಾಗಿದ್ದು 5 ವರ್ಷಗಳ ಒಳಗಿನ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲಾಗುತ್ತದೆ. ಶೇ 100 ಫಲಿತಾಂಶ ಯಶಸ್ವಿಯಾಗಿ ಮಾಡಲು ಸಕಲ ಸಿದ್ಧತೆ ನಡೆಸಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆ ಮಕ್ಕಳ ತಜ್ಞ ಡಾ.ಶ್ರೀನಿವಾಸ್, ಕಡೂರು ರೋಟರಿ ಸಂಸ್ಥೆ ಅಧ್ಯಕ್ಷ ರಘುರಾಮ್, ಸದಸ್ಯರಾದ ಟಿ.ಡಿ..ಸತ್ಯನ್, ಪ್ರೇಮಕುಮಾರ್ ಮತ್ತು ಆರೋಗ್ಯ ಇಲಾಖೆ ಮಮತಾ ಸಿಬ್ಬಂದಿ ವರ್ಗ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.22ಕೆಕೆಡಿಯು1.ಕಡೂರು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀ ಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ತಹಸೀಲ್ದಾರ್ ಸಿ.ಎಸ್.ಪೂರ್ಣೀಮ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.