ಯುವಪೀಳಿಗೆ ಬಸವಣ್ಣನವರ ಆದರ್ಶಗಳನ್ನು ಅಳವಡಿಸಿಕೊಳ್ಳಿ

| Published : May 15 2024, 01:42 AM IST

ಯುವಪೀಳಿಗೆ ಬಸವಣ್ಣನವರ ಆದರ್ಶಗಳನ್ನು ಅಳವಡಿಸಿಕೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ವಿಶ್ವಗುರು ಜಗಜ್ಯೋತಿ ಬಸವಣ್ಣನವರು ತಮ್ಮ ವಚನಗಳ ಮೂಲಕವೇ ಸಮಾಜದಲ್ಲಿ ಬಹುದೊಡ್ಡ ಬದಲಾವಣೆ ತರಲು ಬಯಸಿದ ಅವರು ಜನರಲ್ಲಿ ಜ್ಞಾನದ ದೀವಿಗೆ ಹಚ್ಚಿದ ಮಹಾನ್ ಮಾನವತಾವಾದಿ ಎಂದು ಕರ್ನಾಟಕ ಸಹಕಾರಿ ಮಹಾಮಂಡಳದ ಉಪಾಧ್ಯಕ್ಷ ಜಗದೀಶ ಕವಟಗಿಮಠ ಹೇಳಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ವಿಶ್ವಗುರು ಜಗಜ್ಯೋತಿ ಬಸವಣ್ಣನವರು ತಮ್ಮ ವಚನಗಳ ಮೂಲಕವೇ ಸಮಾಜದಲ್ಲಿ ಬಹುದೊಡ್ಡ ಬದಲಾವಣೆ ತರಲು ಬಯಸಿದ ಅವರು ಜನರಲ್ಲಿ ಜ್ಞಾನದ ದೀವಿಗೆ ಹಚ್ಚಿದ ಮಹಾನ್ ಮಾನವತಾವಾದಿ ಎಂದು ಕರ್ನಾಟಕ ಸಹಕಾರಿ ಮಹಾಮಂಡಳದ ಉಪಾಧ್ಯಕ್ಷ ಜಗದೀಶ ಕವಟಗಿಮಠ ಹೇಳಿದರು.ಪಟ್ಟಣದಲ್ಲಿ ಸಂಪಾದನಾ ಚರಮೂರ್ತಿ ಮಠ, ಕದಳಿ ಮಹಿಳಾ ವೇದಿಕೆ ಹಾಗೂ ವಿವಿಧ ಸಂಘನೆಗಳು ಆಯೋಜಿಸಿದ ಬಸವ ಜಯಂತಿ ಉತ್ಸವ ನಿಮಿತ್ತ ನಡೆದ ಭವ್ಯ ಮೆರವಣಿಗೆಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಪಾಲಿಗೆ 12ನೇ ಶತಮಾನ ಎಂಬುವುದು ಬಹಳ ಮಹತ್ವದ್ದು. ಸಮಾಜದಲ್ಲಿ ಬಹುದೊಡ್ಡ ಬದಲಾವಣೆಯ ಹೊಸ ಚಿಂತನೆ ರೂಪುಗೊಂಡ ಕಾಲವದು. ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಇತಿಹಾಸದಲ್ಲಿ ವಿಶಿಷ್ಟವಾದ ಕಾಲಘಟ್ಟವಿದು. ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಟ ಪದ್ಧತಿಗಳು ಆಚರಣೆಯಲ್ಲಿದ್ದ ಈ ಕಾಲದಲ್ಲಿ ವಚನಕಾರರು ತಮ್ಮ ಸರಳ ವಚನಗಳ ಮೂಲಕ ಸಮಾಜದಲ್ಲಿ ಬದಲಾವಣೆಯನ್ನು ತರಲು ಪ್ರಯತ್ನಿಸಿದ್ದರು. ಜಾತಿಯ ಹಂಗಿಲ್ಲದೇ ಎಲ್ಲ ವರ್ಗದ ವಚನಕಾರರು ವಚನಗಳ ಮೂಲಕ ತಮ್ಮ ಹೊಸ ಚಿಂತನೆಗಳನ್ನು ಕಟ್ಟಿಕೊಡುತ್ತಿದ್ದರು. ಈ ಮೂಲಕ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡಿದ್ದಾರೆ. ಆದ್ದರಿಂದ ಇಂದಿನ ಯುವಪೀಳಿಗೆ ಬಸವಣ್ಣನವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಚಿಕ್ಕೋಡಿ ಸಂಪಾದನಾ ಚರಮೂರ್ತಿ ಮಠದ ಸಂಪಾದನಾ ಸ್ವಾಮಿಗಳು ಸಾನ್ನಿಧ್ಯ ವಹಿಸಿ ಮಾತನಾಡಿ, 12ನೇ ಶತಮಾನದ ಬಹುದೊಡ್ಡ ಸಮಾಜ ಸುಧಾರಕರು ಅವರ ಸಾರಥ್ಯದಲ್ಲಿ ನಡೆದ ಸುಧಾರಣೆಯ ಪ್ರಯತ್ನ ಒಂದು ಸಾಮಾಜಿಕ ಚಳವಳಿಯಾಗಿ ರೂಪುಗೊಂಡಿತ್ತು. ಇವರ ತತ್ವ, ಆದರ್ಶಗಳು, ಚಿಂತನೆಗಳು ಇಂದಿಗೂ ಪ್ರಸ್ತುತ. ವಿಶ್ವಗುರು ಬಸವಣ್ಣನವರು ಹಾಕಿಕೊಟ್ಟ ದಾರಿಯಲ್ಲಿ ಸಾಗಿದರೇ ಜೀವನ ಸುಖಮಯ, ಸಮಾಜವೂ ಸುಂದರ. ಕಾಯಕವೇ ಕೈಲಾಸ ಎಂದು ಕಲಿಸಿಕೊಟ್ಟವರು ಬಸವಣ್ಣನವರು ಎಂದು ಬಣ್ಣಿಸಿದರು.ಕಾಯಕ, ದಾಸೋಹ ತತ್ವಗಳ ಮೂಲಕ ಸಮಾನತೆಯನ್ನು ಸಾರುತ್ತ ಸಕಲಜೀವರಾಶಿಗಳಿಗೂ ಲೇಸನ್ನು ಬಯಸಿದ ಮಹಾನ ಮಾನವತಾವಾದಿ ಅಣ್ಣ ಬಸವಣ್ಣನವರ ವಚನಗಳ ತತ್ವ, ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಮನವಿ ಮಾಡಿದರು.ಗಣ್ಯ ವ್ಯಾಪಾರಸ್ಥರಾದ ಸುಭಾಸ ಕವಲಾಪೂರೆ ಹಾಗೂ ಸಂಪಾದನಾ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು. ಮಠದಲ್ಲಿ ಬಸವ ಜಯಂತಿಯ ಅಂಗವಾಗಿ ಬಸವೇಶ್ವರ ನಾಮಕರಣ ಹಾಗೂ ತಾಯಂದಿರಗೆ ಉಡಿತುಂಬುವ ಕಾರ್ಯಕ್ರಮ ಹಾಗೂ ಬಸವೇಶ್ವರರ ಭಾವಚಿತ್ರ ಮೆರವಣಿಗೆಯು ಸಕಲ ವಾದ್ಯ ವೈಭವದಿಂದ ಚಿಕ್ಕೋಡಿ ಮಹಾನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಸಂಜಯ ಹಿರೇಮಠ, ಶೇಖರ ಚಿತ್ತವಾಡಗಿ, ಮಲ್ಲಿಕಾರ್ಜುನ (ಅಜಯ) ಕವಟಗಿಮಠ, ಸೋಮು ಗವನಾಳೆ, ಕಾಕಾ ಹಿರೇಮಠ, ಬಾಬು ಮಿರ್ಜಿ, ಸುರೇಶ ಕಾಳಿಂಗೆ, ನೀಲಕಂಠ ವಂಟಮುತ್ತೆ, ಮಹಾಂತೇಶ ಕವಲಾಪುರೆ, ಮಂಜುನಾಥ ರೊಟ್ಟಿ, ಜಗದೀಶ್ ಖಿನ್ನವರ, ಶಿವು ಮಿರ್ಜೆ, ಸದಾಶಿವ ಮಾಳಿ, ಮಹಾದೇವ ಹುದ್ದಾರ, ನಾಗರಾಜ ಮೇದಾರ, ವೀಣಾ ಕವಟಗಿಮಠ, ಮಹಾದೇವಿ ಡೋನವಾಡೆ, ಉಮಾ ಮಠದ ಇದ್ದರು.