ಗಾಂಧಿ, ಶಾಸ್ತ್ರೀಜಿ ಆದರ್ಶಗಳನ್ನು ಅಳವಡಿಸಿಕೊಳ್ಳಿ: ಶಾಸಕ ಸಿಮೆಂಟ್ ಮಂಜು

| Published : Oct 03 2024, 01:34 AM IST

ಗಾಂಧಿ, ಶಾಸ್ತ್ರೀಜಿ ಆದರ್ಶಗಳನ್ನು ಅಳವಡಿಸಿಕೊಳ್ಳಿ: ಶಾಸಕ ಸಿಮೆಂಟ್ ಮಂಜು
Share this Article
  • FB
  • TW
  • Linkdin
  • Email

ಸಾರಾಂಶ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅಹಿಂಸೆಯ ಮೂಲಕ ಸ್ವಾತಂತ್ರ್ಯತಂದುಕೊಟ್ಟಂಥ ಮಹಾನ್ ದೇಶಭಕ್ತರಾಗಿದ್ದರು ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜೈ ಜವಾನ್, ಜೈ ಕಿಸಾನ್ ಘೋಷವಾಕ್ಯದೊಂದಿಗೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುನ್ನುಡಿ ಬರೆದಂಥ ಮಹಾನಾಯಕರು.

ಅರಕಲಗೂಡು: ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುನ್ನುಡಿ ಬರೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬ ಪ್ರಜೆಯೂ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದರೆ ಅವರಿಗೆ ನಿಜವಾಗಿ ಗೌರವವನ್ನು ಸಲ್ಲಿಸಿದಂತೆ ಆಗುತ್ತದೆ ಎಂದು ಶಾಸಕ ಎ.ಮಂಜು ತಮ್ಮ ಅಭಿಪ್ರಾಯ ತಿಳಿಸಿದರು.ತಾಲೂಕು ಕಚೇರಿಯಲ್ಲಿ ಬುಧವಾರ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಮತ್ತು ಮಾಜಿ ಪ್ರದಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 120ನೇ ವರ್ಷದ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅಹಿಂಸೆಯ ಮೂಲಕ ಸ್ವಾತಂತ್ರ್ಯತಂದುಕೊಟ್ಟಂಥ ಮಹಾನ್ ದೇಶಭಕ್ತರಾಗಿದ್ದರು ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜೈ ಜವಾನ್, ಜೈ ಕಿಸಾನ್ ಘೋಷವಾಕ್ಯದೊಂದಿಗೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುನ್ನುಡಿ ಬರೆದಂಥ ಮಹಾನಾಯಕರು, ಅದರೆ ಇಂತಹ ಮಹಾತ್ಮರ ಅಚರಣೆಗೆ ಸಾರ್ವಜನಿಕರು ಹೆಚ್ಚು ಪಾಲ್ಗೊಳ್ಳದಿರುವುದು ಶೋಚನೀಯ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಗ್ರೇಡ್ 2 ತಹಶೀಲ್ದಾರ್ ಮಲ್ಲಿಕಾರ್ಜುನ್ ಮತ್ತು ಶಿರಸ್ತೇದಾರ್ ಸಿ‌,ಸ್ವಾಮಿ, ಇ.ಓ,ಪ್ರಕಾಶ್, ಪ,ಪಂ,ಮುಖ್ಯಾಧಿಕಾರಿ ಬಸವರಾಜ ಟಾಕ್ಕಪ್ಪ ಶಿಗ್ಗಾವಿ, ಕಚೇರಿ ಸಿಬ್ಬಂದಿ ಉಜ್ವಲ್, ಹಾಗೂ ರೈತ ಸಂಘದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು, ಕಾರ್ಯಕ್ರಮಕ್ಕೂ ಮುನ್ನ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರತಿಮೆಗೆ ಹೂ ಮಾಲೆ ಹಾಕಿ ನಮನ ಸಲ್ಲಿಸಿದರು.