ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಿ

| Published : Oct 03 2024, 01:30 AM IST

ಸಾರಾಂಶ

ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಯವರಂತಹ ಮಹಾನ್ ನಾಯಕರ ತತ್ವಾದರ್ಶಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಂಡು ದೇಶದ ಅಭಿವೃದ್ದಿಗೆ ಶ್ರಮಿಸಬೇಕೆಂದು ಪ್ರಾಂಶುಪಾಲ ಎಂ.ಡಿ. ಶಿವಕುಮಾರ್ ತಿಳಿಸಿದರು.

ಕನ್ನಡಪ್ರಭವಾರ್ತೆ ತಿಪಟೂರು

ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಯವರಂತಹ ಮಹಾನ್ ನಾಯಕರ ತತ್ವಾದರ್ಶಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಂಡು ದೇಶದ ಅಭಿವೃದ್ದಿಗೆ ಶ್ರಮಿಸಬೇಕೆಂದು ಪ್ರಾಂಶುಪಾಲ ಎಂ.ಡಿ. ಶಿವಕುಮಾರ್ ತಿಳಿಸಿದರು.

ನಗರದ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಏಸುಕ್ರಿಸ್ತ, ಬುದ್ಧ, ಬಸವ, ಅಂಬೇಡ್ಕರ್, ಪೈಗಂಬರ್ ಇವರ ಸಾಲಿನಲ್ಲಿ ನಿಲ್ಲುವ ವಿಶ್ವಕಂಡ ಶ್ರೇಷ್ಠ ದಾರ್ಶನಿಕ ಸಂತ ಗಾಂಧೀಜಿ. ಗಾಂಧೀಜಿಯವರು ಸ್ವಾವಲಂಬಿ, ಸ್ವಾಭಿಮಾನಿ, ಸದೃಢ ಭಾರತ ನಿರ್ಮಾಣವಾಗಬೇಕೆಂದು ಕನಸು ಕಂಡಿದ್ದರು ಎಂದು ಗಾಂಧೀಜಿಯವರ ಹೋರಾಟದ ಹಾದಿಯ ಬಗ್ಗೆ ಸ್ಮರಿಸಿದರು. ವಿಶೇಷ ಉಪನ್ಯಾಸ ನೀಡಿದ ರಾಜ್ಯಶಾಸ್ತ್ರ ಉಪನ್ಯಾಸಕ ಜಿ.ಆರ್. ಪ್ರಕಾಶ್, ಸರಳ ಜೀವನವನ್ನು ತನ್ನ ನಿತ್ಯ ಜೀವನದಲ್ಲಿ ಪ್ರಾಯೋಗಿಕವಾಗಿ ಅಳವಡಿಸಿಕೊಂಡ ಮಾದರಿ ವ್ಯಕ್ತಿತ್ವ ಗಾಂಧಿ ಅವರದ್ದಾಗಿತ್ತು. ಪ್ರಸ್ತುತ ಸಂದರ್ಭದಲ್ಲಿ ಅವರ ಶಾಂತಿ ಸಂದೇಶ ಅಂತರಾಷ್ಟ್ರೀಯ ಮಟ್ಟದಲ್ಲೂ ಅಗತ್ಯವೆಸಿದೆ. ಬದುಕನ್ನು ಅವಶ್ಯಕತೆಯಾಗಿ ತೆಗೆದುಕೊಂಡು ಪ್ರಕೃತಿ ಮತ್ತು ಭೂಮಿ ಇರುವುದು ನಮ್ಮ ಅವಶ್ಯಕತೆಯನ್ನು ಪೂರೈಸಲಿಕ್ಕೆ ವಿನಃ ದುರಾಸೆಯನ್ನಲ್ಲ ಎಂಬ ಗಾಂಧಿಯವರ ಮಾತು ಸ್ಮರಣೀಯ ಎಂದರು. ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಸಚ್ಚಿದಾನಂದಮೂರ್ತಿ, ಷಡಕ್ಷರಿ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.