ಚೌಡಯ್ಯನವರ ವಚನಗಳ ಮೌಲ್ಯ ಅಳವಡಿಸಿಕೊಳ್ಳಿ: ಶಾಸಕ ಬಣಕಾರ

| Published : Jan 24 2024, 02:02 AM IST

ಚೌಡಯ್ಯನವರ ವಚನಗಳ ಮೌಲ್ಯ ಅಳವಡಿಸಿಕೊಳ್ಳಿ: ಶಾಸಕ ಬಣಕಾರ
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜದಲ್ಲಿ ಅಸಮಾನತೆಯನ್ನು ಹೋಗಲಾಡಿಸುವಲ್ಲಿ ಹಾಗೂ ಸಾಮಾಜಿಕ ಕ್ರಾಂತಿಯ ಮೂಲಕ ಮಾನವ ಕುಲಕ್ಕೆ ನ್ಯಾಯ ಒದಗಿಸುವಂತಹ ಕೆಲಸವನ್ನು ಅಂಬಿಗರ ಚೌಡಯ್ಯನವರು ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಹಿರೇಕೆರೂರು

ವಚನಗಳ ಮೂಲಕ ಸಮಾಜದಲ್ಲಿ ಸಮಾನತೆ, ಐಕ್ಯತೆ ಮೂಡಿಸಲು ಅವಿರತ ಪ್ರಯತ್ನ ಮಾಡಿದ ಅಂಬಿಗರ ಚೌಡಯ್ಯನವರ ಆದರ್ಶಗಳು ಮತ್ತು ವಚನಗಳಲ್ಲಿರುವ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ತಾಲೂಕು ಆಡಳಿತದ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಅಸಮಾನತೆಯನ್ನು ಹೋಗಲಾಡಿಸುವಲ್ಲಿ ಹಾಗೂ ಸಾಮಾಜಿಕ ಕ್ರಾಂತಿಯ ಮೂಲಕ ಮಾನವ ಕುಲಕ್ಕೆ ನ್ಯಾಯ ಒದಗಿಸುವಂತಹ ಕೆಲಸವನ್ನು ಅಂಬಿಗರ ಚೌಡಯ್ಯನವರು ಮಾಡಿದ್ದಾರೆ. ಅಂದಿನ ಜನರ ಭಾವನೆಗಳಿಗೆ ಸ್ಪಂದಿಸಿ ಸಮಾಜದಲ್ಲಿನ ಅಂಕು-ಡೊಂಕುಗಳನ್ನು ತಿದ್ದುವ ಕೆಲಸ ಮಾಡಿ ನವಸಮಾಜ ನಿರ್ಮಾಣ, ಸಮಾನತೆ, ಹೊಸ ಮನೋಭಾವನೆಗಳನ್ನು ಬೆಳೆಸುವಲ್ಲಿ ಅವರ ಪಾತ್ರ ಬಹುಮುಖ್ಯವಾಗಿದೆ. ಸಮಾನತೆಯನ್ನು ಸಾರುವುದಕ್ಕಾಗಿ ೧೨ನೇ ಶತಮಾನದಲ್ಲಿ ಶಿವಶರಣರು ವಚನಗಳ ಮೂಲಕ ಕ್ರಾಂತಿಯೆಬ್ಬಿಸಿದರು. ಈ ಮೇರು ಪ್ರತಿಭೆಗಳಲ್ಲಿ ಚೌಡಯ್ಯನವರೂ ಒಬ್ಬರು. ಇವರ ಮಾನವೀಯ ಮೌಲ್ಯಗಳು ಇಂದಿಗೂ ಎಂದೆಂದಿಗೂ ಪ್ರಸ್ತುತವಾಗಿವೆ ಎಂದರು.

ಕಾರ್ಯಕ್ರಮದಲ್ಲಿ ಸುರೇಶ ಪೂಜಾರ ಅಂಬಿಗರ ಚೌಡಯ್ಯನವರ ಕುರಿತು ಉಪನ್ಯಾಸ ನೀಡಿದರು.

ತಹಸೀಲ್ದಾರ ಎಚ್. ಪ್ರಭಾಕರಗೌಡ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೋಟೆ ಭೀಮರಾವ್, ತೋಟಗಾರಿಕೆ ಸಹಾಯಕ ನಿರ್ದೇಶಕ ಲಕ್ಷ್ಮೀಕಾಂತ, ಮಹಾದೇವಪ್ಪ ಬಾರ್ಕಿ, ಗಿರೀಶ ಬಾರ್ಕಿ, ಚೌಡಪ್ಪ ಪೂಜಾರ, ಬಸಪ್ಪ ಜಾಡರ, ಚಂದ್ರಪ್ಪ ಜಾಡರ ಹಾಗೂ ಸಮಾಜದ ಮುಖಂಡರು ಇದ್ದರು.

ರಾಮನ ಬಗ್ಗೆ ಅವಹೇಳನಕಾರಿ ಪೋಸ್ಟ್; ವ್ಯಕ್ತಿ ವಶಕ್ಕೆ:

ಶ್ರೀರಾಮನ ಕುರಿತು ಅವಹೇಳನಕಾರಿ ವಾಟ್ಸ್‌ಆ್ಯಪ್ ಪೋಸ್ಟ್ ಮಾಡಿದ ಹಿನ್ನೆಲೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತಗ್ಗಿಹಳ್ಳಿ ಗ್ರಾಮದ ಮುಸ್ಲಿಂ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತನನ್ನು ಖಲಂದರ ಕಣವಿ ಎಂದು ಗುರುತಿಸಲಾಗಿದ್ದು, ವಾಟ್ಸ್‌ಆ್ಯಪ್ ಪೋಸ್ಟ್ ಹಿನ್ನೆಲೆಯಲ್ಲಿ ಅವನ ವಿರುದ್ಧ ಕಾನ್‌ಸ್ಟೇಬಲ್ ಮಹೇಶ್ ಕೇಲೂರು ದೂರು ನೀಡಿದ್ದರಿಂದ ಅವನನ್ನು ವಶಕ್ಕೆ ಪಡೆಯಲಾಗಿದೆ.

ಸ್ಟೇಟಸ್ ಮೂಲಕ ದ್ವೇಷ ವೈಷಮ್ಯ ಉಂಟು ಮಾಡುವ ವಿಡಿಯೋ ಹಾಕಿದ್ದ ಎನ್ನಲಾಗಿದೆ. ಪಾಕಿಸ್ತಾನ ಧ್ವಜದ ಚಿತ್ರವಿಟ್ಟು, ಹಮ್ ಬಾಪ್ ಹೈ ತುಮಾರೆ ಎಂದು ಪೋಸ್ಟ್ ಮಾಡಿದ್ದರಿಂದ ಯುವಕನನ್ನು ಸವಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.