ಸಾರಾಂಶ
ಖಾನಾಪುರ ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಗೃಹದಲ್ಲಿ ಶುಕ್ರವಾರ ಬೆಳಗಾವಿಯ ನೆಹರು ಯುವ ಕೇಂದ್ರ, ಕಾಮಶಿನಕೊಪ್ಪದ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ.
ಕನ್ನಡಪ್ರಭ ವಾರ್ತೆ ಖಾನಾಪುರ
ಸ್ವಾಮಿ ವಿವೇಕಾನಂದರು ನಮ್ಮ ದೇಶಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ವಿವೇಕಾನಂದರ ತತ್ವ ಸಿದ್ಧಾಂತಗಳನ್ನು ಎಲ್ಲರೂ ಮೈಗೂಡಿಸಿಕೊಂಡು ಹೋಗಬೇಕು ಎಂದು ಅವರೊಳ್ಳಿ ರುದ್ರಸ್ವಾಮಿ ಮಠದ ಚನ್ನಬಸವ ದೇವರು ನುಡಿದರು.ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಗೃಹದಲ್ಲಿ ಶುಕ್ರವಾರ ಬೆಳಗಾವಿಯ ನೆಹರು ಯುವ ಕೇಂದ್ರ, ಕಾಮಶಿನಕೊಪ್ಪದ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಡಾ.ದಿಲೀಪ ಜವಳಕರ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಬಸವರಾಜ ತಳವಾರ ಸ್ವಾಮಿ ವಿವೇಕಾನಂದರ ತತ್ವ ಸಿದ್ಧಾಂತ, ರಾಷ್ಟ್ರಭಕ್ತಿ. ಮತ್ತು ಗುರುವಿಗೆ ನಮನ ಕುರಿತು ಉಪನ್ಯಾಸ ನೀಡಿದರು. ನಾಗೇಂದ್ರ ಚೌಗಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗೆ ಮಾತುಗಾರ ದತ್ತು ಪೂಜಾರ ನಗೆ ಹನಿ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ರಾಜೇಂದ್ರ ರಾಯಕಾ. ಸುಭಾಸ ನಿಲಜಕರ, ಕೇಶವ ಪಾಟೀಲ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು. ಅಂಬರೀಷ ರೇವತಗಾವ ನಿರೂಪಿಸಿದರು. ಕೌಶಲ್ಯ. ಡಿ ಸ್ವಾಗತಿಸಿದರು. ಎಸ್.ಕೆ.ಮೂಲಿಮನಿ ವಂದಿಸಿದರು.