ಸಾರಾಂಶ
ಕವಿ ಹಾಗೂ ವಿಜ್ಞಾನಿಗಳ ಆಲೋಚನೆ ಒಂದೇ ಆಗಿದೆ
ಕೊಪ್ಪಳ: ಸಾಹಿತ್ಯ ಜನರ ಬದುಕನ್ನು ಚಲನಶೀಲನಗೊಳಿಸುವಂತದ್ದಾಗಿದ್ದು, ಈ ದಿಸೆಯಲ್ಲಿ ಉದಯೋನ್ಮುಖ ಕವಿಗಳು ಕವನ ರಚನೆಗೆ ಆದ್ಯತೆ ನೀಡಬೇಕು ಎಂದು ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಹೇಳಿದ್ದಾರೆ.
ಕೊಪ್ಪಳ ವಿಶ್ವವಿದ್ಯಾಲಯದಿಂದ ಆಯೋಜಿತವಾಗಿದ್ದ ದಸರಾ ಕಾವ್ಯ ಸಂಭ್ರಮ 2025 ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಎಂ.ವೆಂಕಟೇಶ್ವರುಲು ಮಾತನಾಡಿ, ಕವಿ ಹಾಗೂ ವಿಜ್ಞಾನಿಗಳ ಆಲೋಚನೆ ಒಂದೇ ಆಗಿದೆ ಎಂದರು.
ಕೊಪ್ಪಳ ವಿಶ್ವದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಅಧ್ಯಕ್ಷತೆ ವಹಿಸಿದ್ದರು.ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಮೇಶ, ರಾಯಚೂರು ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಶಿವಾನಂದ ಕೆಳಗಿನಮನಿ, ವಿಜಯಪುರ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ, ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷೆ ಡಾ.ವಸುಂದರಾ ಭೂಪತಿ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಎಚ್.ಎಲ್.ಪುಷ್ಪಾ ಮಾತನಾಡಿದರು.
ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಕಲ್ಯಾಣವಾಣಿ ವಿಶೇಷ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಅಕ್ಕಮಹಾದೇವಿ ವಿವಿಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ವೇದಿಕೆಯಲ್ಲಿದ್ದರು.