ಎಮ್ಮೆಮಾಡು ಗ್ರಾಮದಲ್ಲಿ ವಿರಾಜಪೇಟೆ ಶಾಸ ಎ.ಎಸ್. ಪೊನ್ನಣ್ಣ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಣ್ಣ ನೀರಾವರಿ ಇಲಾಖೆಯ ವತಿಯಿಂದ 25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಿರು ಸೇತುವೆ ಕಾಮಗಾರಿಗೆ ಶಾಸಕರು ಇದೇ ವೇಳೆ ಶಂಕುಸ್ಥಾಪನೆ ನೆರವೇರಿಸಿದರು.
ನಾಪೋಕ್ಲು: ಎಮ್ಮೆಮಾಡು ಗ್ರಾಮದಲ್ಲಿ ವಿರಾಜಪೇಟೆ ಶಾಸ ಎ.ಎಸ್. ಪೊನ್ನಣ್ಣ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಣ್ಣ ನೀರಾವರಿ ಇಲಾಖೆಯ ವತಿಯಿಂದ 25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಿರು ಸೇತುವೆ ಕಾಮಗಾರಿಗೆ ಶಾಸಕರು ಇದೇ ವೇಳೆ ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು, ಗ್ರಾಮದ ಕುಡಿಯುವ ನೀರಿನ ಅಭಿವೃದ್ಧಿಗಾಗಿ ಸುಮಾರು 60 ಸಾವಿರ ಲೀಟರ್ ಸಾಮರ್ಥ್ಯದ ನೀರು ಶೇಖರಣಾ ಟ್ಯಾಂಕ್ ಸಹ ನಿರ್ಮಾಣವಾಗಲಿದೆ ಎಂದು ತಿಳಿಸಿದರು.ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೌಕತ್ ಆಲಿ, ಡಿಸಿಸಿ ಉಪಾಧ್ಯಕ್ಷ ಹಾಗೂ ಕೆಡಿಪಿ ಸದಸ್ಯ ಅಬ್ದುಲ್ ರೆಹಮಾನ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್, ಸಾದಲಿ, ವಲಯ ಅಧ್ಯಕ್ಷ ಮೂಸಾ, ಮಾಜಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಸಿರಾಜ್ಪ ರವಂಡ ಮತ್ತಿರರಿದ್ದರು.