ಸಾರಾಂಶ
ಗುಳೇದಗುಡ್ಡ: ಶುಕ್ರವಾರ ತಾಲೂಕಿ ತೆಗ್ಗಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ₹ 18 ಲಕ್ಷ ಅನುದಾನದಲ್ಲಿ ನಿರ್ಮಿತಿ ಕೇಂದ್ರದಿಂದ ನೂತನ ಅಂಗನವಾಡಿ ಕಟ್ಟಡವನ್ನು ಶಾಸಕ ಭೀಮಸೇನ ಚಿಮ್ಮನಕಟ್ಟಿ ಉದ್ಘಾಟಿಸಿದರು.ನಂತರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ
ಮಕ್ಕಳು ನಾಡಿನ ಆಸ್ತಿಯಾಗಲು ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಶ್ರಮವಹಿಸಿ ಶಿಕ್ಷಣ ನೀಡಿ ಮಕ್ಕಳ ಸರ್ವಾಂಗೀಣ ವಿಕಸನಕ್ಕೆ ಆದ್ಯತೆ ನೀಡಬೇಕೆಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.ಶುಕ್ರವಾರ ತಾಲೂಕಿ ತೆಗ್ಗಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ₹ 18 ಲಕ್ಷ ಅನುದಾನದಲ್ಲಿ ನಿರ್ಮಿತಿ ಕೇಂದ್ರದಿಂದ ನೂತನ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಬದಲಾವಣೆಗೆ ಶಿಕ್ಷಣ ಅಗತ್ಯವಾಗಿದೆ. ಎಲ್ಲ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಮಕ್ಕಳಿಗೆ ಆಸ್ತಿ ಮಾಡದೆ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕೆಂದು ಹೇಳಿದರು. ನಂತರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಕೆಲವಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಯಲ್ಲವ್ವ ಸಂಗೊಂದಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗ್ರಾಮದ ಶ್ರದ್ಧಾನಂದ ಮಠದ ವಿದ್ಯಾನಂದ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿದರು.ತಾಪಂ ಇಒ ಮಲ್ಲಿಕಾರ್ಜುನ ಬಡಿಗೇರ, ಮಾಜಿ ಗ್ರಾಪಂ ಅಧ್ಯಕ್ಷ ರಮೇಶ ಗೌಡರ, ಪಿಡಿಒ ಸುಭಾಶ್ಚಂದ್ರ ಚಲವಾದಿ, ನಿರ್ಮಿತಿ ಕೇಂದ್ರದ ಅರುಣಕುಮಾರ, ಮಲ್ಲಿಕಾರ್ಜುನ ಗಣಶೆಟ್ಟಿ, ರಾಮಸ್ವಾಮಿ ಪೂಜಾರ, ಸಿಡಿಪಿಒ ಹಿರೇಮಠ, ಮಹಾದೇವಪ್ಪ ಕಳ್ಳಿಗುಡ್ಡ, ಮಂಜು ಮದಕಟ್ಟಿ, ಅಯ್ಯಪ್ಪ ಸೀಮಿಕೇರಿ, ಹನುಮಂತ ಮಾದರ, ಹನಮಂತ ಗಿರಿಯಪ್ಪ ಗಂಗೂರ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳು ಗ್ರಾಮದ ಹಿರಿಯರು ಉಪಸ್ಥಿತರಿದ್ದರು.