ಸಾರಾಂಶ
ಕೊಪ್ಪಳ: ರಾಜ್ಯದಲ್ಲಿ ಬಡವರ ಬದುಕು ಹಸನಗೊಳಿಸುವ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ರಾಜ್ಯ ಸರ್ಕಾರ ಆದ್ಯತೆ ನೀಡಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.ತಾಲೂಕಿನ ಬಂಡಿಹರ್ಲಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಾದ ಅಗಳಕೇರ, ಬಂಡಿಹರ್ಲಾಪುರ ಗ್ರಾಮದಲ್ಲಿ ವಿವಿಧ ಯೋಜನೆ ಅಡಿಯಲ್ಲಿ ರಸ್ತೆ, ಶಾದಿಮಹಲ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ಹಾಗೂ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಕ್ಷೇತ್ರದ ಅಭಿವೃದ್ಧಿಗೆ ಕೆಕೆಆರ್‌ಡಿಬಿ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಅಡಿ ಹೆಚ್ಚಿನ ಅನುದಾನವನ್ನು ಸರ್ಕಾರ ನೀಡುತ್ತಿದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಇದು ಹೆಚ್ಚು ಸಹಕಾರಿಯಾಗುತ್ತಿದೆ. ರಾಜ್ಯದ ಜನತೆಗೆ ನೀಡಿರುವ ಗ್ಯಾರಂಟಿ ಯೋಜನೆಗಳ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡುಗೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಒತ್ತು ನೀಡಿದ್ದಾರೆ. ಬರದ ತೀವ್ರತೆಯಲ್ಲಿ ಸಹ ನೀರಿಗೆ ಕೊರತೆಯಾಗದಂತೆ ಅಧಿಕಾರಿಗಳಿಗೆ ಈಗಾಗಲೇ ಸಚಿವರು ಹಾಗೂ ಶಾಸಕರು ಸೂಚನೆ ನೀಡಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನತೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.ಬರುವ ಲೋಕಸಭಾ ಚುನಾವಣೆಯಲ್ಲಿ ಅಭಿವೃದ್ಧಿಪರ ಕೆಲಸ ಮಾಡುವ ಸರ್ಕಾರ ಮತ್ತು ನಾಯಕರಿಗೆ ಅಭೂತಪೂರ್ವ ಬೆಂಬಲ ಸೂಚಿಸಿ ಮತ್ತೊಮ್ಮೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ಹಾರಿಸಬೇಕೆಂದು ಕರೆ ನೀಡಿದರು
ಈ ಸಂದರ್ಭದಲ್ಲಿ ಮಾಜಿ ಜಿಪಂ ಅಧ್ಯಕ್ಷ ಟಿ. ಜನಾರ್ದನ ಹುಲಿಗಿ, ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಶ ಪಲ್ಟನ್, ಬಾಲಚಂದ್ರನ್, ಮುಖಂಡರಾದ ಮಾನ್ವಿ ಪಾಷಾ ಸಲೀಂ ಅಳವಂಡಿ, ಸಲಹಾ ಸಮಿತಿ ಅಧ್ಯಕ್ಷ ಪಾಲಕ್ಷಪ್ಪ ಹೊಸಳ್ಳಿ, ಚೆನ್ನಕೃಷ್ಣ ವೀರಭದ್ರಸ್ವಾಮಿ ಅಳ್ಕೆರಾ, ವಿಶ್ವನಾಥರಾಜ, ನಾಗರಾಜ ಪಟ್ವಾರಿ, ನಿಂಗಜ್ಜ, ಶಹಪುರ ಮೊಹಮ್ಮದಸಾಬ್ ಅಗಳಕೆರ, ಉದ್ಯಮಿ ಚಂದ್ರಶೇಖರ ಉಪಸ್ಥಿತರಿದ್ದರು.